
ಸುದ್ದಿ ಸಂಕ್ಷಿಪ್ತ
ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ
ಮಂಡ್ಯ (ಮಾ.6): ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಅಪರ ಸರ್ಕಾರಿ ವಕೀಲರ ಹುದ್ದೆಗೆ 7 ವರ್ಷಗಳ ಕಾಲ ವಕೀಲ ವೃತ್ತಿ ಪೂರೈಸಿರುವ ಅರ್ಹ ವಕೀಲರುಗಳ ಪಟ್ಟಿಯನ್ನೊಳಗೊಂಡ ಪ್ರಸ್ಥಾವನೆಯಯನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಅಭಿಪ್ರಾಯ ಪಡೆದು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿಕೊಡುವಂತೆ ಸರ್ಕಾರವು ನಿರ್ದೇಶನ ನೀಡಿದ್ದು ಅರ್ಹ ವಕೀಲರುಗಳಿಂದ ಅಪರ ಸರ್ಕಾರಿ ವಕೀಲರ ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ.
ಅರ್ಹ ವಕೀಲರುಗಳು ಅರ್ಜಿಯನ್ನು ಮಾರ್ಚ್ 15 ರೊಳಗಾಗಿ ಅಗತ್ಯ ದೃಢೀಕೃತ ದಾಖಲಾತಿಗಳೊಂದಿಗೆ ನಿಗದಿತ ನಮೂನೆಯಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯ, ಮಂಡ್ಯ ಇಲ್ಲಿಗೆ ದ್ವಿಪ್ರತಿಯಲ್ಲಿ ಅರ್ಜಿ ಸಲ್ಲಿಸುವಂತೆ ಮಂಡ್ಯ ಜಿಲ್ಲಾಧಿಕಾರಿಗಳಾದ ಎನ್.ಮಂಜುಶ್ರೀ ಅವರು ಪ್ರಕಟಿಸಿದ್ದಾರೆ. (ಎನ್.ಬಿ)