ಮೈಸೂರು

ನೇತಾಜಿ ಸುಭಾಷ್‍ಚಂದ್ರ ಬೋಸ್ ಜನ್ಮದಿನಾಚರಣೆ : ಬಿಜೆಪಿ ಯುವಮೋರ್ಚಾದಿಂದ ರಕ್ತದಾನ

ಬಿಜೆಪಿ ಯುವಮೋರ್ಚಾ ಮೈಸೂರು ನಗರ ಘಟಕದ ವತಿಯಿಂದ ಸುಭಾಷ್ ಚಂದ್ರ ಬೋಸರ 120ನೇ ಜನ್ಮದಿನದ ಪ್ರಯುಕ್ತ ಬಿಜೆಪಿ ನಗರ ಕಚೇರಿಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.

ಸೋಮವಾರ ನಡೆದ ರಕ್ತದಾನ ಶಿಬಿರದಲ್ಲಿ ಬಿಜೆಪಿಯ ಯುವಮೋರ್ಚಾದ 50ಕ್ಕೂ ಅಧಿಕ ಕಾರ್ಯಕರ್ತರು ಪಾಲ್ಗೊಂಡು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ಬಿಜೆಪಿ ಯುವ ಮೋರ್ಚಾ ಮೈಸೂರು ನಗರ ಘಟಕದ ಅಧ್ಯಕ್ಷ ಗೋಕುಲ್ ಗೋವರ್ಧನ್ ಕೆ, ಪ್ರಧಾನ ಕಾರ್ಯದರ್ಶಿಗಳಾದ ಸೋಮಶೇಖರ್ ಮತ್ತು ಸಂಪತ್ ಅವರು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು  ಸ್ವತಃ ರಕ್ತದಾನ ಮಾಡಿದರು.

ಬಳಿಕ ಮಾತನಾಡಿದ ಗೋಕುಲ್ ಗೋವರ್ಧನ್ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರಲ್ಲಿ ಸುಭಾಷ್ ಚಂದ್ರ ಬೋಸ್‍ರವರು ಅಪ್ರತಿಮರಾಗಿದ್ದರು. ಸುಭಾಷ್ ಚಂದ್ರ ಬೋಸ್‍ರವರ ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ. ಅವುಗಳಲ್ಲಿ ಕೆಲವನ್ನಾದರೂ ನಾವುಗಳು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಅವರು ಹೊಂದಿದ್ದ ಆಸೆ-ಆಕಾಂಕ್ಷೆಗಳನ್ನು ಈಡೇರಿಸಿದಂತಾಗುತ್ತದೆ ಎಂದರು.

ಬೋಸ್‍ರವರು ಬಾಲ್ಯದಿಂದಲೇ ಅಸಾಮಾನ್ಯ ಹೋರಾಟಗಾರ ಎನಿಸಿಕೊಂಡಿದ್ದರು. ಪೋಷಕರ ಆಸೆಯಂತೆ ಇಂಗ್ಲೆಂಡಿಗೆ ತೆರಳಿ ಐಸಿಎಸ್ ವ್ಯಾಸಂಗ ಮಾಡಿ ನಾಲ್ಕನೇ ರ್ಯಾಂಕ್ ಪಡೆದರು. ಮುಂದಿನ ದಿನಗಳಲ್ಲಿ ಅವರಿಗೆ ಸರ್ಕಾರದ ಉನ್ನತ ಹುದ್ದೆ ದೊರೆತರೂ ಅದನ್ನು ನಿರಾಕರಿಸಿ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು. ಇಂತಹ ಮಹನೀಯರನ್ನು ನೆನಪು ಮಾಡಿಕೊಳ್ಳುವುದು ನಮ್ಮೆಲ್ಲರ ಆದ್ಯಕರ್ತವ್ಯ ಎಂದರು.

Leave a Reply

comments

Related Articles

error: