ಪ್ರಮುಖ ಸುದ್ದಿಮೈಸೂರು

ಮಾಜಿ ಸಿಎಂ ಸಿದ್ದರಾಮಯ್ಯನವರ ಅಭಿಮಾನಿಗಳು ಯಾರ ಪರ ಬ್ಯಾಟಿಂಗ್ ಮಾಡಿದರು ಗೊತ್ತಾ?

ಮೈಸೂರು,ಮಾ.7 : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡಿರುವ ಹಿನ್ನಲೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಗೆ ಬಿಟ್ಟುಕೊಡಬೇಕು ಎಂಬ ಕೂಗು ಪದೇ ಪದೇ ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರಿಂದ ಕೇಳಿ ಬರುತ್ತಿದ್ದು ಈ ನಿಟ್ಟಿನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಆ ಕೂಗು ಮತ್ತಷ್ಟು ಗಾಢವಾಯಿತು.

ಕ್ಷೇತ್ರವನ್ನು ಕಾಂಗ್ರೆಸ್ ಗೆ ಬಿಟ್ಟುಕೊಡುವುದಲ್ಲದೇ ಮಾಜಿ ಸಚಿವ ಸಿ.ಹೆಚ್.ವಿಜಯಶಂಕರ್ ಅವರನ್ನೇ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಘೋಷಿಸಬೇಕೆಂದು ಕರ್ನಾಟಕ ರಾಜ್ಯ ಸಿದ್ದರಾಮಯ್ಯನವರ ಅಭಿಮಾನಿಗಳ ಬಳಗದ ವತಿಯಿಂದ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದ್ದು, ಎರಡು ಬಾರಿ ಸಂಸದರಾಗಿರುವ ವಿಜಯಶಂಕರ್ ಅವರು ಉತ್ತಮ ಸನ್ನಡತೆಯ ವ್ಯಕ್ತಿಯಾಗಿದ್ದು ಸಾರ್ವಜನಿಕ ಕ್ಷೇತ್ರದಲ್ಲಿಯೂ ಉತ್ತಮ ನಾಯಕರಾಗಿರುವ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ ಕಾಂಗ್ರೆಸ್ ಗೆಲ್ಲುವು ಸಾಧಿಸಲಿದೆ ಎಂದು ಬಳಗದ ರಾಜ್ಯಾಧ್ಯಕ್ಷ ಹಿನಕಲ್ ಪ್ರಕಾಶ್ ಒತ್ತಾಯಿಸಿದರು.

ಈ ಬಗ್ಗೆ ಪಕ್ಷದ ವರಿಷ್ಠರು ಹೆಚ್ಚಿನ ಗಮನಹರಿಸಬೇಕೆಂದು ಮನವಿ ಮಾಡಲಾಯಿತು.

ಸಿದ್ದರಾಮಯ್ಯನವರು ಗೆದ್ದರೇ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂಬದನ್ನು ಮನಗಂಡಿದ್ದ ಅವರ ವಿರೋಧ ತಂಡದ ಕುತಂತ್ರದಿಂದ ಕ್ಷೇತ್ರದಲ್ಲಿ ಸೋಲುಂಡರೇ ಹೊರತು ಅವರು ಐದು ವರ್ಷದ ಆಡಳಿತಾವಧಿಯಲ್ಲಿ ಉತ್ತಮ ಕಾರ್ಯಗಳನ್ನು, ಯೋಜನೆಗಳನ್ನು ನಾಡಿಗೆ ನೀಡಿದ್ದಾರೆ ಎಂದರು.

ಮೈ.ತಾ.ಪಂ ಮಾಜಿ ಅಧ್ಯಕ್ಷೆ ಮಂಜುಳ ಮಂಜುನಾಥ್, ನಗರಾಧ್ಯಕ್ಷ ಹೆಬ್ಬಾಳ್ ವಿಜಯ್, ಜಿಲ್ಲಾ ಅಧ್ಯಕ್ಷ ಮುಳ್ಳೂರು ದೇವರಾಜ್ ಹಾಗೂ ಇತರರ ಕಾರ್ಯಕರ್ತರು ಹಾಜರಿದ್ದರು. (ವರದಿ : ಕೆ.ಎಂ.ಆರ್)

Leave a Reply

comments

Related Articles

error: