ಮೈಸೂರು

ದುಡಿಯುವ ಕೈಗಳಿಗೆ ಸರ್ಕಾರ ಮೂಲಭೂತ ಸೌಕರ್ಯ ನೀಡಬೇಕು : ಸಾ.ರಾ.ಮಹೇಶ್

ಸಾರ್ವಜನಿಕರಿಂದ ತೆರಿಗೆ ಸಂಗ್ರಹಿಸುವ ಸರ್ಕಾರ ದುಡಿಯುವ ಕೈಗಳನ್ನು ಬಲ ಪಡಿಸಿ ಮೂಲಭೂತ ಸೌಕರ್ಯಗಳನ್ನು ನೀಡಬೇಕು ಎಂದು ಕೆ.ಆರ್.ನಗರದ ಶಾಸಕ ಸಾ.ರಾ.ಮಹೇಶ್ ತಿಳಿಸಿದರು.

ಮೈಸೂರಿನ ಬಿ.ಎನ್.ಬಹದ್ದೂರ್ ಇನ್ಸಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಸೈನ್ಸ್ ನಲ್ಲಿ ಏರ್ಪಡಿಸಿದ ಸರಕು ಸೇವಾ ತೆರಿಗೆ ಒಂದು ಅವಲೋಕನ ಕಾರ್ಯಕ್ರಮವನ್ನು ಸಾ.ರಾ.ಮಹೇಶ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಜಿಎಸ್‍ಟಿ ಜಾರಿಯಿಂದ ದುಡಿಯುವ ಕೈಗಳಿಗೆ ಸಹಕಾರಿಯಾಗುತ್ತದೆ. ಸರ್ಕಾರ ಜಾರಿಗೆ ತರುವ ಎಲ್ಲಾ ಯೋಜನೆಗಳು ಆದಾಯ ಮತ್ತು ಸೇವಾ ತೆರಿಗೆಯನ್ನು ಅವಲಂಬಿಸಿರುತ್ತದೆ  ಎಂದರು.

ಆದಾಯ ತೆರಿಗೆ ಇಲಾಖೆಯ ಕೆಳಹಂತದ ಅಧಿಕಾರಿಗಳು ವಾಣಿಜ್ಯೋದ್ಯಮಿಗಳು, ಕೈಗಾರಿಕೋದ್ಯಮಿಗಳು ಮತ್ತು ಟ್ರೇಡರ್ಸ್‍ಗಳಿಂದ ಅಧಿಕ ತೆರಿಗೆಯನ್ನು ವಸೂಲಿ ಮಾಡುತ್ತಾರೆ. ಈ ಕುರಿತು ಹಿರಿಯ ಅಧಿಕಾರಿಗಳು ಗಮನ ಹರಿಸಿ ಇದಕ್ಕೆ ಕಡಿವಾಣ ಹಾಕಬೇಕೆಂದು ಕೆ.ಆರ್.ನಗರದ ಶಾಸಕ ಸಾ.ರಾ.ಮಹೇಶ್ ತಿಳಿಸಿದರು. ಜಿಎಸ್ ಟಿಯಿಂದ ಕೈಗಾರಿಕೋದ್ಯಮಿಗಳು, ವಾಣಿಜ್ಯೋದ್ಯಮಿಗಳು ಪ್ರಾಮಾಣಿಕತೆಯಿಂದ ತೆರಿಗೆ ಕಟ್ಟುತ್ತಾರೆ ಎಂದರು.

ಈ ಸಂದರ್ಭ ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಬಿ.ವಿ.ರವಿ ,ಮೈಸೂರು ಚೇಂಬರ್ಸ್ ಆಫ್ ಕಾಮರ್ಸ್   ಆ್ಯಂಡ್ ಇಂಡಸ್ಟ್ರಿ ಅಧ್ಯಕ್ಷ ಎ.ಎಸ್.ಸತೀಶ್, ಮಾಜಿ ಮೇಯರ್ ಆರ್.ಲಿಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: