ಪ್ರಮುಖ ಸುದ್ದಿಮೈಸೂರು

ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರವಾಸ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.24 ಮತ್ತು 25ರಂದು ಮೈಸೂರು ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಜ.24ರಂದು(ಇಂದು) ಮಧ್ಯಾಹ್ನ 12.05ಕ್ಕೆ ಮಂಡಕಳ್ಳಿ  ವಿಮಾನನಿಲ್ದಾಣಕ್ಕೆ ಆಗಮಿಸಲಿದ್ದು, ಮಂಡ್ಯ ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮಂಡ್ಯ ಜಿಲ್ಲೆಗೆ ರಸ್ತೆಯ ಮೂಲಕ ತೆರಳಲಿದ್ದಾರೆ.

ಸಾಯಂಕಾಲ 4.15ಕ್ಕೆ ಸುತ್ತೂರು ಕೃಷಿ ವಿಜ್ಞಾನ ಕೇಂದ್ರದ ಸಮೀಪ ನಿರ್ಮಿಸಲಾಗಿರುವ ಲೋಕೋಪಯೋಗಿ ಅತಿಥಿ ಗೃಹದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಸುತ್ತೂರು ಕ್ಷೇತ್ರದಲ್ಲಿ ಚಾಮರಾಜನಗರ ವಿಭಾಗದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ನೂತನ ಬಸ್ ನಿಲ್ದಾಣದ ಶಂಕುಸ್ಥಾಪನೆ ಮತ್ತು ಸುತ್ತೂರು ಕ್ಷೇತ್ರದಲ್ಲಿ ಆಯೋಜಿಸಿರುವ ಆದಿ ಜಗದ್ಗುರು ಶ್ರೀಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಸಂಜೆ.6.45ಕ್ಕೆ ರಸ್ತೆ ಮೂಲಕ ಮೈಸೂರಿಗೆ ಆಗಮಿಸಲಿದ್ದಾರೆ.

ಜ.25ರಂದು ಬೆಳಿಗ್ಗೆ 10ಗಂಟೆಗೆ ಮೈಸೂರು ಪ್ರಾದೇಶಿಕ  ಆಯುಕ್ತರ ಕಚೇರಿ ಆವರಣದಲ್ಲಿ ಆಯೋಜಿಸಿರುವ ಮೈಸೂರು ಜಿಲ್ಲೆ ಅಭಿವೃದ್ಧಿ ಕಾರ್ಯಕ್ರಮಗಳ 2016-17ನೇ ಸಾಲಿನ ಪ್ರಗತಿಪರಿಶೀಲನಾ ಸಭೆಯಲ್ಲಿ ಭಾಗವಹಿಸಿ, ಸಂಜೆ 6ಕ್ಕೆ ರಸ್ತೆಯ ಮೂಲಕ ಬೆಂಗಳೂರು ತಲುಪಲಿದ್ದಾರೆ.

Leave a Reply

comments

Related Articles

error: