ಸುದ್ದಿ ಸಂಕ್ಷಿಪ್ತ

ಅರಿವು ಕಾರ್ಯಕ್ರಮ .11.            

ಮೈಸೂರು ಮಾ.9 : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರಿಗೆ ವಿವಿಧ ಯೋಜನೆಗಳಲ್ಲಿ ನೀಡಲಾಗುತ್ತಿರುವ ಸೌಲಭ್ಯಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಮಾರ್ಚ್ 11 ರಂದು ಬೆಳಿಗ್ಗೆ 11 ಗಂಟೆಗೆ ಹುಣಸೂರು ತಾಲ್ಲೂಕಿನ ಪೆಂಜಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದೆ.

ಹುಣಸೂರು ವಿಧಾನಸಭಾ ಸದಸ್ಯರಾದ ಅಡಗೂರು ಹೆಚ್.ವಿಶ್ವನಾಥ್ ಕಾರ್ಯಕ್ರಮ ಉದ್ಘಾಟಿಸುವರು ಎಂದು ಹುಣಸೂರು ತಾಲ್ಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಪುಟ್ಟಲಿಂಗೇಗೌಡ ಅವರು ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: