ಮೈಸೂರು

ಹಾವು ಕಡಿದು ಮಹಿಳೆ ಸಾವು

ಹಾವು ಕಚ್ಚಿದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ಕೆ.ಆರ್.ನಗರ ತಾಲೂಕಿನಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಗಂಧನಹಳ್ಳಿ ಗ್ರಾಮದ ದೊಡ್ಡೇಗೌಡನ ಪತ್ನಿ ಯಶೋದಾ(44) ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಮೃತರಿಗೆ ಮೂವರು ಮಕ್ಕಳಿದ್ದು, ಇದೀಗ ಅವರು ತಾಯಿ ಇಲ್ಲದ ತಬ್ಬಲಿಗಳಾಗಿದ್ದಾರೆ.

ಸಾಲಿಗ್ರಾಮ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

comments

Related Articles

error: