ಪ್ರಮುಖ ಸುದ್ದಿಮೈಸೂರು

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ : ಕಾಂಗ್ರೆಸ್ ಅಭ್ಯರ್ಥಿಗೆ ಟಿಕೇಟ್ ನೀಡುವಂತೆ ಒತ್ತಾಯ

ದೇಶ(ನವದೆಹಲಿ),ಮಾ.11:- ಲೋಕಸಭಾ ಚುನಾವಣೆ ಕಣ ಗರಿಗೆದರಿದ್ದು, ಕಾಂಗ್ರೆಸ್ ತೆಕ್ಕೆಗೆ ಮೈಸೂರು ಕೊಡಗು ಕ್ಷೇತ್ರ  ಲಭಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಟಿಕೆ‌ಟ್ ಹಂಚಿಕೆಗಾಗಿ ದೆಹಲಿಯಲ್ಲಿ‌   ಸಭೆ ನಡೆಯುತ್ತಿದ್ದು, ಮೈಸೂರು ಕೊಡಗು ಕ್ಷೇತ್ರಕ್ಕಾಗಿ ಸೂರಜ್ ಹೆಗ್ಡೆ ತೀವ್ರ ಒತ್ತಡ ಹಾಕುತ್ತಿದ್ದಾರೆ ಎನ್ನಲಾಗಿದೆ.  ಸೂರಜ್ ಹೆಗ್ಡೆ ದಿವಂಗತ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಮೊಮ್ಮಗನಾಗಿದ್ದು, ದೆಹಲಿಯಲ್ಲೆ ಬೀಡುಬಿಟ್ಟಿದ್ದಾರೆ. ಅವರ ಜೊತೆ ಕಾಂಗ್ರೆಸ್ ಮುಖಂಡರು ಕೂಡ ಬೀಡು ಬಿಟ್ಟಿದ್ದಾರೆ. ಮೂಲ‌ ಕಾಂಗ್ರೆಸ್ಸಿಗರಿಗೆ ಟಿಕೆಟ್ ನೀಡಲು ಒತ್ತಾಯ ಕೇಳಿ ಬಂದಿದ್ದು, ಕಾಂಗ್ರೆಸ್ ಟಿಕೆಟ್ ಹಂಚಿಕೆ ತೀವ್ರ ಕುತೂಹಲ‌ ಕೆರಳಿಸಿದೆ. ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡರನ್ನು ಮೈಸೂರು-ಕೊಡಗು ಕ್ಷೇತ್ರದಲ್ಲಿ  ಕಣಕ್ಕಿಳಿಸಿದರೆ ಗೆಲ್ಲಿಸುವ ಜವಾಬ್ದಾರಿ ನಮ್ಮದು ಎಂದಿರುವ ಜೆಡಿಎಸ್ ನಾಯಕರು ಇದೀಗ ಕಾಂಗ್ರೆಸ್ ಅಭ್ಯರ್ಥಿಗಳು ಕಣಕ್ಕಿಳಿದರೆ ಬೆಂಬಲಿಸಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: