ಮೈಸೂರು

ಸಾರ್ವಜನಿಕರ ದೂರು ಸ್ವೀಕರಿಸಲು ನಿಯಂತ್ರಣ ಕೊಠಡಿ

ಮೈಸೂರು,ಮಾ.12:- 2019ರ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣೆ ಶಾಖೆಯಿಂದ ಸ್ವೀಕೃತವಾಗುವ ದೂರು / ಮಾಹಿತಿಗಳನ್ನು ಸ್ವೀಕರಿಸಿ, ಸಂಬಂಧಪಟ್ಟವರಿಗೆ ಆಗಿಂದಾಗ್ಗೆ ರವಾನಿಸಿ ಕ್ರಮಕೈಗೊಳ್ಳುವಂತೆ ಸೂಚಿಸಲು  ಕಚೇರಿಯನ್ನೊಳಗೊಂಡಂತೆ ಚುನಾವಣೆ ಪ್ರಕ್ರಿಯೆ ಮುಗಿಯುವವರೆವಿಗೂ ಜಿಲ್ಲೆಯಾದ್ಯಂತ ನಿಯಂತ್ರಣ ಕೊಠಡಿಗಳನ್ನು ದೂರವಾಣಿ ಸಂಖ್ಯೆಯೊಂದಿಗೆ ಸಿಬ್ಬಂದಿಗಳನ್ನು ಹಗಲು ಮತ್ತು ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸಲು (24*7 ಸ್ವೀಕರಿಸಲು) ನಿಯೋಜಿಸಲಾಗಿದೆ.

ಜಿಲ್ಲೆಯಲ್ಲಿ ಯಾವುದೇ ಅಬಕಾರಿ ಅಕ್ರಮಗಳು ಕಂಡುಬಂದಲ್ಲಿ ಸಾರ್ವಜನಿಕರು ನಿಯಂತ್ರಣ ಕೊಠಡಿಗಳಿಗೆ ಕರೆ ಮಾಡಬಹುದಾಗಿರುತ್ತದೆ ಎಂದು ಡೆಪ್ಯೂಟಿ ಕಮೀಷನರ್ ಆಫ್ ಎಕ್ಸೈಸ್ ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: