
ಮೈಸೂರು
ಶಸ್ತ್ರಾಸ್ತ್ರ ಠೇವಣಿ ಇಡುವಂತೆ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಸೂಚನೆ
ಮೈಸೂರು,ಮಾ.12:- ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದಿರುವುದರಿಂದ ಯಾವುದೇ ಆಯುಧ ಮತ್ತು ಶಸ್ತ್ರಾಸ್ತ್ರ ಹೊಂದಿರುವವರು ಚುನಾವಣೆ ಮುಗಿಯುವವರೆಗೂ ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡಬೇಕೆಂದು ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಅವರು ಸೂಚನೆ ನೀಡಿದ್ದಾರೆ.
ಮಾರ್ಚ್ 10ರಿಂದ ಮೇ.27ರವರೆಗೆ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಈ ವೇಳೆ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಸಾರ್ವಜನಿಕರು ತಮ್ಮಲ್ಲಿ ಹೊಂದಿರುವ ಆಯುಧ, ಬಂದೂಕು, ರಿವಾಲ್ವರ್, ಶಸ್ತ್ರಾಸ್ತ್ರ ಮತ್ತು ಸ್ಪೋಟಕಗಳನ್ನು ಇಟ್ಟುಕೊಳ್ಳುವಂತಿಲ್ಲ. ಈ ಆಯುಧಗಳನ್ನು ಇಟ್ಟುಕೊಳ್ಳಲು ಪರವಾನಗಿ ಹೊಂದಿರುವವರೂ ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಶಸ್ತ್ರಾಸ್ತ್ರಗಳನ್ನು ಠೇವಣಿ ಇಡಬೇಕು ಎಂದು ಆದೇಶ ಹೊರಡಿಸಿದ್ದಾರೆ. (ಕೆ.ಎಸ್,ಎಸ್.ಎಚ್)