ಮೈಸೂರು

ಮೈಸೂರಿನಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರ : ಸಿಹಿ ಹಂಚಿ ಸಂಭ್ರಮಾಚರಣೆ

ಮೈಸೂರಿನಲ್ಲಿ ನೂತನ ಪಾಸ್ ಪೋರ್ಟ್ ಸೇವಾ ಕೆಂದ್ರ ಸ್ಥಾಪನೆಯಾಗುತ್ತಿರುವ ಹಿನ್ನಲೆಯಲ್ಲಿ ಮೈಸೂರಿನ ಅಗ್ರಹಾರ ವೃತ್ತದಲ್ಲಿ ಪ್ರಜ್ಞಾವಂತ ನಾಗರಿಕ ವೇದಿಕೆ ವತಿಯಿಂದ ಸಂಭ್ರಮಾಚರಣೆ ನಡೆಯಿತು.

ಪ್ರಜ್ಞಾವಂತ ನಾಗರಿಕ ವೇದಿಕೆಯವರು ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮವನ್ನು ಆಚರಿಸಿದರು. ಈ ಸಂದರ್ಭ ಮಾತನಾಡಿದ ಅವರು ಮೈಸೂರಿನಂತಹ ಜಿಲ್ಲೆಯಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರ ಇಲ್ಲದಿರುವುದರಿಂದ ಜನರು ಬೆಂಗಳೂರಿಗೆ ಹೋಗುತ್ತಿದ್ದರು. ಆದರೆ ಪ್ರತಾಪ್ ಸಿಂಹ ಹಾಗೂ ಅನಂತ್ ಕುಮಾರ್ ಅವರ ಕಾರ್ಯದಿಂದ ಮೈಸೂರಿಗೆ ಪಾಸ್ ಪೋರ್ಟ್ ಸೇವಾ ಕೇಂದ್ರ ಪ್ರಾರಂಭವಾಗುತ್ತಿದೆ ಎಂದರು.
ವೇದಿಕೆಯ ಸಂಚಾಲಕ ಜಗದೀಶ್ ಕಡಕೋಳ, ಕೆ.ಎಂ.ಪಿ.ಕೆ ಚಾರಿಟಬಲ್ ಟ್ರಸ್ಟ್ ನ ವಿಕ್ರಮ್ ಅಯ್ಯಂಗಾರ್, ಮಾಜಿ ನಗರಪಾಲಿಕೆ ಸದಸ್ಯ ಪಾರ್ಥಸಾರಥಿ, ಲಕ್ಷ್ಮೀದೇವಿ,ಸಂದೀಪ್,ರಾಕೇಶ್ ಭಟ್. ನಿಶಾಂತ್,ಸ್ವಾಮಿ,ಚಂದ್ರು ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: