ದೇಶಪ್ರಮುಖ ಸುದ್ದಿ

ಮಹಾರಾಷ್ಟ್ರದಲ್ಲಿ ಪ್ರತಿಪಕ್ಷ ನಾಯಕನ ಪುತ್ರನೇ ಬಿಜೆಪಿ ಸೇರ್ಪಡೆ

ಪುಣೆ (ಮಾ.12): ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‍ಗೆ ಭಾರಿ ಮುಖಭಂಗವಾಗಿದೆ. ವಿಧಾನಸಭೆಯ ಪ್ರತಿಪಕ್ಷ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್ ಅವರ ಪುತ್ರ ಸುಜಯ್‌ ವಿಖೆ ಪಾಟೀಲ್‌ ಬಿಜೆಪಿಗೆ ಸೇರಿಕೊಂಡಿದ್ದಾರೆ.

ಇದೇ ವೇಳೆ ಮಾತನಾಡಿ, ಪ್ರಧಾನಿ ಮೋದಿ ಅವರ ನಾಯಕತ್ವ ನನ್ನ ಮೇಲೆ ಗಾಢ ಪ್ರಭಾವ ಬೀರಿರುವುದರಿಂದ ನಾನು ಬಿಜೆಪಿಗೆ ಸೇರಿಕೊಂಡಿರುವುದಾಗಿ ಹೇಳಿರುವ ಅವರು ನಾನು ಬಿಜೆಪಿ ಮಾರ್ಗದರ್ಶನದಲ್ಲಿ ಕೆಲಸ ಮಾಡುವ ಮೂಲಕ ಕುಟುಂಬ ಹೆಮ್ಮೆಪಡುವಂತೆ ಮಾಡುತ್ತೇನೆ ಎಂದು ಸುಜಯ್‌ ವಿಖೆ ಪಾಟೀಲ್‌ ಅವರು ಹೇಳಿದ್ದಾರೆ.

ಸುಜಯ್ ವಿಖೆ ಪಾಟೀಲ್‌ ಅವರನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಹಿತ ಬಿಜೆಪಿಯ ಇತರ ನಾಯಕರು ಬಿಜೆಪಿಗೆ ಸ್ವಾಗತಿಸಿದ್ದಾರೆ. ಸುಜಯ್ ಕಾಂಗ್ರೆಸ್‌ನ ಹಿರಿಯ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್‌ ಅವರ ಪುತ್ರನಾಗಿದ್ದು ಅಹ್ಮದ್‌ನಗರ ಲೋಕಸಭಾ ಚುನಾವಣೆಗೆ ಸೀಟು ಸಿಗದ ಹಿನ್ನೆಲೆಯಲ್ಲಿ ಬೇಸರಗೊಂಡಿದ್ದರು. ಈ ಕ್ಷೇತ್ರದಲ್ಲಿ ವಿಖೆ ಪಾಟೀಲ್ ಕುಟುಂಬ ಬಿಗಿಹಿಡಿತ ಹೊಂದಿದೆ. ಈ ಕ್ಷೇತ್ರವನ್ನು ಎನ್‌ಸಿಪಿ ತನಗೆ ಬೇಕೆಂದು ಹಠ ಹಿಡಿದಿರುವುದರಿಂದ ನಿರಾಸೆಗೊಂಡ ವಿಖೆ ಪಾಟೀಲ್, ಬಿಜೆಬಿ ಸೇರಿದ್ದಾರೆ ಎಂದು ವರದಿಯಾಗಿದೆ. (ಎನ್.ಬಿ)

Leave a Reply

comments

Related Articles

error: