ಪ್ರಮುಖ ಸುದ್ದಿಮೈಸೂರು

ಐಎನ್ ಎಸ್ ಪಿ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಮೈಸೂರು,ಮಾ.13 : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಹೊಸ ಕಾಂಗ್ರೆಸ್ ಪಕ್ಷ (ಐಎನ್ ಸಿಪಿ) ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಸಿದ್ಧತೆ ಮಾಡಿಕೊಂಡಿದ್ದು, ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಪಕ್ಷದ ರಾಷ್ಟ್ರೀಯಾಧ್ಯಕ್ಷ ಅಯೂಬ್ ಖಾನ್ ತಿಳಿಸಿದರು.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ರಿಜ್ವಾನ್ ಹರ್ಷದ್ ಅವರಿಗೆ ಹಾಗೂ ಮೈಸೂರಿನಲ್ಲಿ ಸಿದ್ದರಾಮಯ್ಯನವರು ಸ್ಪರ್ಧಿಸಿದರೆ ಅವರಿಗೆ ಬೆಂಬಲಿಸಲು ಪಕ್ಷ ನಿರ್ಧರಿಸಿರುವುದಾಗಿ ತಿಳಿಸಿದರು.

ಹಾಗೆಯೇ ಮಂಡ್ಯದಲ್ಲಿ ಸುಮಲತಾ ಅಂಬರೀಷ್, ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ್, ನಟರಾದ ಪ್ರಕಾಶ್ ರೈ, ಉಪೇಂದ್ರ ಅವರು ತಮ್ಮನ್ನು ಸಂಪರ್ಕಿಸಿ ಬೆಂಬಲ ಕೋರಿದರೆ ಆ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸದೇ ಬೆಂಬಲ ನೀಡಲಾಗುವುದು ಎಂದರು.

ಅಲ್ಲದೇ  ಎಲ್ಲಾ ಕ್ಷೇತ್ರಗಳಲ್ಲಿಯೂ ಇಬ್ಬರು ಮೂವರು ಆಕಾಂಕ್ಷಿಗಳಿದ್ದು ಶೀಘ್ರದಲ್ಲಿಯೇ ಪಟ್ಟಿ ಅಂತಿಮ ಗೊಳಿಸಲಾಗುವುದು, ರಾಷ್ಟ್ರದಲ್ಲಿ 24 ರಾಜ್ಯಗಳಲ್ಲಿ 390 ಕ್ಷೇತ್ರಗಳಿಂದ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸುವುದಾಗಿ ತಿಳಿಸಿದರು.

ಪಕ್ಷದ ಮುಖಂಡರಾದ ಮಹಾಂತೇಶ್, ಬಸವನಗೌಡ, ಜೋಸೆಫ್, ಸಲೀಂ, ಬಸಪ್ಪ, ಗುರುಲಿಂಗರಾಜ್ ಇತರರು ಗೋಷ್ಠಿಯಲ್ಲಿ ಇದ್ದರು. (ವರದಿ : ಕೆ.ಎಂ.ಆರ್)

Leave a Reply

comments

Related Articles

error: