ಮನರಂಜನೆ

‘ಸಿಂಗ’ ಸಿನಿಮಾದ ಟೀಸರ್ ರಿಲೀಸ್ ಮಾಡಲಿದ್ದಾರೆ ಚಾಲೆಂಜಿಂಗ್ ಸ್ಟಾರ್

ಬೆಂಗಳೂರು,ಮಾ.13-ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿರು ಸರ್ಜಾ ಅಭಿನಯದ ‘ಸಿಂಗ’ ಚಿತ್ರದ ಟೀಸರ್ ಬಿಡುಗಡೆ ಮಾಡಲಿದ್ದಾರೆ.

ಮಾ.15 ರಂದು ಚಿರಂಜೀವಿ ಸರ್ಜಾ ಅಭಿನಯದ ‘ಸಿಂಗ’ ಟೀಸರ್ ರಿಲೀಸ್ ಆಗುತ್ತಿದ್ದು, ಡಿ ಬಾಸ್ ಮುಖ್ಯ ಅತಿಥಿಯಾಗಿ ಆಗಮಿಸುತ್ತಿದ್ದಾರೆ.

ಉದಯ್ ಮೆಹ್ತಾ ನಿರ್ಮಾಣ ಮಾಡಿರುವ ಈ ಚಿತ್ರವನ್ನ ವಿಜಯ್ ಕಿರಣ್ ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ಸಿಂಗಂ ಚಿತ್ರದ ಶೂಟಿಂಗ್ ಮುಗಿದಿದ್ದು, ಸದ್ಯದಲ್ಲೇ ತೆರೆಗೆ ಬರುವ ತಯಾರಿಯಲ್ಲಿದೆ. ಇನ್ನು ಈ ಚಿತ್ರಕ್ಕೆ ಅಧಿತಿ ಪ್ರಭುದೇವ ನಾಯಕಿಯಾಗಿದ್ದು, ಕಿರಣ್ ಹಂಪಾಪುರ ಛಾಯಾಗ್ರಹಣ, ಗಣೇಶ್ ಅವರ ಸಂಕಲನವಿದೆ. ಧರ್ಮವಿಶ್ ಸಂಗೀತ ನೀಡಿದ್ದು, ಡಾ ವಿ ನಾಗೇಂದ್ರ ಪ್ರಸಾದ್, ಕವಿರಾಜ್ ಮತ್ತು ಚೇತನ್ ಸಾಹಿತ್ಯ ರಚಿಸಿದ್ದಾರೆ. (ಎಂ.ಎನ್)

Leave a Reply

comments

Related Articles

error: