ಮೈಸೂರು

ವಿಕಲಚೇತನರ ಮತದಾರರ ಪಟ್ಟಿ ಸಿದ್ಧ : ಮಾಹಿತಿ ಪಡೆಯಲು ಸೂಚನೆ

ಮೈಸೂರು ಮಾ.14:-  ಮೈಸೂರು ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ ವತಿಯಿಂದ 2019ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ, ಮೈಸೂರು ಜಿಲ್ಲೆಯ ಎಲ್ಲಾ 11 ವಿಧಾನಸಭಾ ಕ್ಷೇತ್ರಗಳಲ್ಲಿ 18 ವರ್ಷ ಮೇಲ್ಪಟ್ಟ ಅರ್ಹ ವಿಕಲಚೇತನರ ಮತದಾರರ ಪಟ್ಟಿಯನ್ನು ತಯಾರಿಸಲಾಗಿದೆ.

ವಿಕಲಚೇತನರು ಹಾಗೂ ಅಸಕ್ತ ಮತದಾರರು ಕಡ್ಡಾಯ ಮತದಾನಕ್ಕಾಗಿ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ, ಮಾಹಿತಿಗಳನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ಪುಲಕೇಶಿ ರಸ್ತೆ, ತಿಲಕ್‍ನಗರ, ಮೈಸೂರು, ಇಲ್ಲಿ ಪ್ರಾರಂಭಿಸಿರುವ ಮಾಹಿತಿ ಸಲಹಾ ಕೇಂದ್ರದಲ್ಲಿ ಕಛೇರಿ ಕೆಲಸದ ದಿನಗಳಲ್ಲಿ ಬೆಳಗ್ಗೆ 10   ಗಂಟೆಯಿಂದ ಸಂಜೆ 6   ಗಂಟೆಯವರೆಗೆ ವಿಕಲಚೇತನರ ಸಹಾಯವಾಣಿ ಕೇಂದ್ರ ದೂರವಾಣಿ ಸಂಖ್ಯೆ :0821-2490333ಕ್ಕೆ ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆ ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: