ಮೈಸೂರು

ಮೈಸೂರಿನ ಅಪರ ಜಿಲ್ಲಾಧಿಕಾರಿಗಳ ದೂರವಾಣಿ ಸಂಖ್ಯೆ ಬದಲಾವಣೆ

ಮೈಸೂರು, ಮಾ.14:- ಲೋಕಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಯಾಗಿರುವ ಅಪರ ಜಿಲ್ಲಾಧಿಕಾರಿಗಳನ್ನು ಸಾರ್ವಜನಿಕರು ಸಂಪರ್ಕಿಸಲು ದೂರವಾಣಿ ಸಂಖ್ಯೆಯನ್ನು ಮಾಧ್ಯಮಗಳಲ್ಲಿ ಪ್ರಕಟಿಸಲಾಗಿತ್ತು.

ಅಪರ ಜಿಲ್ಲಾಧಿಕಾರಿಯಾಗಿದ್ದ ಬಿ.ಆರ್. ಪೂರ್ಣಿಮಾ ಅವರ ಸ್ಥಾನಕ್ಕೆ ಅನುರಾಧ ಅವರು ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ ಅನುರಾಧ ಅವರ ದೂರವಾಣಿ ಸಂಖ್ಯೆ 8277863536 ಅನ್ನು ಬಳಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: