ಮೈಸೂರು

ಅಡಗೂರು ಗ್ರಾಮ ಪಂಚಾಯತಿಯಲ್ಲಿ ಮಹಿಳೆಯರಿಗೆ ಮತದಾನ ಜಾಗೃತಿ

ಮೈಸೂರು, ಮಾ.15:- ಕೆ.ಆರ್ ನಗರ ತಾಲೂಕಿನ ಅಡಗೂರು ಗ್ರಾಮ ಪಂಚಾಯತಿಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ  ಹಿನ್ನಲೆಯಲ್ಲಿ ವಿಶೇಷವಾಗಿ ಮಹಿಳೆಯರಿಗೆ ಕಡ್ಡಾಯವಾಗಿ    ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು.

ಏಪ್ರಿಲ್ 18 ರಂದು ನಡೆಯುವ ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರು ಮತದಾನದಿಂದ ಹೊರಗುಳಿಯ ಬಾರದೆಂದು ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಡಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಹಿಳೆಯರಿಗೆ ಮತದಾನ ದಿನದಂದು ಮತಗಟ್ಟೆಗೆ ಹೋಗಿ ತಪ್ಪದೇ ಮತ ಚಲಾವಣೆ ಮಾಡುವಂತೆ  ಅರಿವು ಮೂಡಿಸಲಾಯಿತು.

ನರೇಗಾ ಸಹಾಯಕ ನಿರ್ದೇಶಕರಾದ ಗಿರೀಶ್ ಅವರು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಹಿಳೆಯರಿಗೆ ಇ.ವಿ.ಎಂ ಹಾಗೂ ವಿವಿ ಪ್ಯಾಟ್ ಮಾದರಿ ತೋರಿಸಿ, ಹೇಗೆ ಮತ ಹಾಕಬೇಕು ಮತ್ತು ಮತ ಚಲಾವಣೆಯ ಖಾತ್ರಿ ಹೇಗೆ ಮಾಡಿಕೋಳ್ಳುವುದು ಎಂಬ ಮಾಹಿತಿಯನ್ನು ತಿಳಿಸಿದರು.

ಮಹಿಳೆಯರು ಮುಖ್ಯವಾಹಿನಿಗೆ ಬರಲು ತಮ್ಮನ್ನು ತಾವು ಮತದಾನದಲ್ಲಿ ತೊಡಗಿಸಿಕೊಳ್ಳಬೇಕು. ಮಹಿಳೆಯರು ಮತದಾನ ಮಾಡಿ ಮತದಾನದ ಮಹತ್ವವನ್ನ ಸಾರಲು ಉತ್ಸುಕರಾಗಿದ್ದರು.

18 ವರ್ಷ ಪೂರ್ಣಗೊಂಡವರು ಮತದಾರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಂಡಿರುವ ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು. ಮತದಾರರ ಪಟ್ಟಿಯಲ್ಲಿ ಹೆಸರನ್ನು ಖಾತ್ರಿ ಪಡಿಸಿಕೊಳ್ಳವುದು.

ಪ್ರಜಾಪ್ರಭುತ್ವ ಬಲಪಡಿಸಲು ಮಹಿಳೆಯರಿಗೂ ಕೂಡ ಮತದಾನ ಒಂದು ಪವಿತ್ರ ಅವಕಾಶ. ಉತ್ತಮ ಸಮಾಜ ನಿರ್ಮಾಣಕ್ಕಾಗಿ ತಪ್ಪದೆ ಮತದಾನ ಮಾಡಬೇಕು ಎಂದರು.

ಕಾರ್ಯನಿರ್ವಾಹಕ ಅಧಿಕಾರಿ ಟಿ.ಎಂ ಲಕ್ಷ್ಮಿ ಮೋಹನ್ , ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಸುಮಿತ್ರಾ, ತಾಲೂಕು ಪಂಚಾಯತ್ ವ್ಯವಸ್ಥಾಪಕರಾದ ಅನಿತಾ ಹಾಗೂ ಅಡಗೂರು ಗ್ರಾಮ ಪಂಚಾಯತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಭೀಮರಾಯ್, ಹೊಸ ಅಗ್ರಹಾರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕುಮಾರಸ್ವಾಮಿ, ಅರ್ಜುನ ಹಳ್ಳಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಹಾಗೂ ಭೇರ್ಯ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕಾರ್ತಿಕ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: