ಕರ್ನಾಟಕಪ್ರಮುಖ ಸುದ್ದಿಮೈಸೂರು

ಐಟಿ ವರದಿ ನನ್ನ ಕೈಸೇರಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

ಸಚಿವ ರಮೇಶ್ ಜಾರಕಿ ಹೊಳಿ ಹಾಗೂ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಮನೆಗಳ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿ ನೀಡಿರುವ ವರದಿ ಇನ್ನೂ ನನ್ನ ಕೈ ಸೇರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿ ತಮ್ಮ ನಿವಾಸದ ಎದುರು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಐಟಿ ದಾಳಿಯ ಕುರಿತಾದ ಯಾವುದೇ ಮಾಹಿತಿಗಳೂ ನನ್ನ ಬಳಿ ಇಲ್ಲ.ಈ ಕುರಿತು ಮಾಧ್ಯಮಗಳಲ್ಲಿ ಮಾತ್ರ ವರದಿಯಾಗಿದೆ. ಐಟಿ ಅಧಿಕಾರಿಗಳೇನು ನನಗೆ ವರದಿ ಕೊಡುವುದಿಲ್ಲ.  ಆದರೂ ವರದಿ ತರಿಸಿಕೊಂಡು ಪರಿಶೀಲಿಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇನೆ ಎಂದು ಸ್ಪಷ್ಟಪಡಿಸಿದರು.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತ ಪ್ರಶ್ನೆಗೆ  ವಿಸ್ತರಣೆ ಸದ್ಯಕ್ಕಿಲ್ಲ ಎಂದರು. ನಂಜನಗೂಡು ವಿಧಾನಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾರನ್ನು ಕಣಕ್ಕಿಳಿಸುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗೇನೂ  ಕೊರತೆಯಿಲ್ಲ. ಆದರೂ ಚುನಾವಣೆ ದಿನಾಂಕ ಘೋಷಣೆಯಾಗುವವರೆಗೂ ಅಭ್ಯರ್ಥಿಯ ಹೆಸರನ್ನು ಪ್ರಕಟಿಸುವುದಿಲ್ಲ ಎಂದು ತಿಳಿಸಿದರು. ಬಿಜೆಪಿ ಮುಖಂಡರು ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರಲ್ಲ ಎಂದಾಗ  ಬಿ.ಎಸ್ ಯಡಿಯೂರಪ್ಪ ಮತ್ತು ಕೆ.ಎಸ್ ಈಶ್ವರಪ್ಪನವರು  ಸುಖಾಸುಮ್ಮನೆ ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಇಬ್ಬರು ಸಚಿವರು ಮನೆಗೆ ಹೋಗುತ್ತಾರೆ ಎಂದಿದ್ದರು. ಆದರೆ ಯಾರು ಹೋಗಿದ್ದಾರೆ ಎಂದರು.
ಈ ಸಂದರ್ಭ ಕಾಂಗ್ರೆಸ್ ನ ಕೆಲವು ಮುಖಂಡರು ಮುಖ್ಯಮಂತ್ರಿಗಳ ಜೊತೆಗಿದ್ದರು.

Leave a Reply

comments

Related Articles

error: