ದೇಶಪ್ರಮುಖ ಸುದ್ದಿ

24 ವರ್ಷದ ನಂತರ ಒಂದೇ ವೇದಿಯಯಲ್ಲಿ ಮುಲಾಯಂ-ಮಾಯಾ ಪ್ರಚಾರ!

ಲಕ್ನೋ (ಮಾ.16): ಬರೋಬ್ಬರಿ 24 ವರ್ಷಗಳ ನಂತರ ಬಿಎಸ್ಪಿ ನಾಯಕಿ ಮಾಯಾವತಿ ಅವರು ಎಸ್ಪಿ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಪರವಾಗಿ ಉತ್ತರ ಪ್ರದೇಶದ ಮೈನ್ಪುರಿ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.

ಏಪ್ರಿಲ್ 19 ರಂದು ಮೈನ್ಪುರಿಯಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಇದರಲ್ಲಿ ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ರಾಷ್ಟ್ರೀಯ ಲೋಕದಳದ ಅಧ್ಯಕ್ಷ ಅಜಿತ್ ಸಿಂಗ್ ಭಾಗವಹಿಸಲಿದ್ದಾರೆ. 1995ರಲ್ಲಿ ಮುಲಾಯಂ ಸಿಂಗ್ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ಮಾಯಾವತಿ, ಅದಾದ ನಂತರ ಇದೇ ಮೊದಲ ಬಾರಿಗೆ ಅವರೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ.

ಉತ್ತರ ಪ್ರದೇಶದ ಒಟ್ಟು 80 ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷ 37 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, ಬಿಎಸ್ಪಿ 38 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದೆ. ಲೋಕಸಭಾ ಚುನಾವಣೆ ಏಪ್ರಿಲ್ 11 ಹಾಗೂ ಮೇ 19ರ ಮಧ್ಯೆ ಏಳು ಹಂತಗಳಲ್ಲಿ ನಡೆಯಲಿದ್ದು, ಮೇ 23ರಂದು ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆಯ ಬಗ್ಗೆ ಅಂಕಿ- ಅಂಶಗಳು ಇಲ್ಲಿವೆ. (ಎನ್.ಬಿ)

Leave a Reply

comments

Related Articles

error: