ದೇಶ

ಬಿಜೆಪಿ ತೊರೆದ ಸಂಸದ ಶ್ಯಾಮಾ ಚರಣ್ ಗುಪ್ತಾ

ಪ್ರಯಾಗರಾಜ್,ಮಾ.16-ಬಿಜೆಪಿ ಲೋಕಸಭೆ ಚುನಾವಣೆಗೆ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕೆಲ ಸಮಯದಲ್ಲೇ ಉತ್ತರಪ್ರದೇಶದ ಪ್ರಯಾಗರಾಜ್ ಬಿಜೆಪಿ ಸಂಸದ ಶ್ಯಾಮಾ ಚರಣ್ ಗುಪ್ತಾ ಪಕ್ಷ ತೊರೆದಿದ್ದಾರೆ.

2014ರಲ್ಲಿ ಅಲಹಾಬಾದ್(ಪ್ರಯಾಗರಾಜ್) ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದ ಶ್ಯಾಮಾ ಚರಣ್ ಗುಪ್ತಾ, ಇದೀಗ ಮರಳಿ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಗುಪ್ತಾ ಬಂಡಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.

ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಮೇಲೆ ಹರಿಹಾಯ್ದಿರುವ ಶ್ಯಾಮಾ ಚರಣ್ ಗುಪ್ತಾ, ಅಧಿಕಾರಕ್ಕಾಗಿ ಬಿಜೆಪಿ ನಾಯಕರು ಸಮಾಜ ಒಡೆಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದೇ ಏ.11ರಿಂದ ಒಟ್ಟು 7 ಹಂತಗಳಲ್ಲಿ ಲೋಕಸಭೆಗೆ ದೇಶಾದ್ಯಂತ ಚುನಾವಣೆ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಮತ್ತು ಏ.23ರಂದು ಒಟ್ಟು ಎರಡು ಹಂತಗಳಲ್ಲಿ ಚುನಾವಣೆ ಘೋಷಣೆಯಾಗಿದೆ. ಮೇ 23 ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟಣೆಯಾಗಲಿದೆ. (ಎಂ.ಎನ್)

Leave a Reply

comments

Related Articles

error: