ದೇಶ

ಜಮ್ಮು-ಕಾಶ್ಮೀರ: ಕಂದಕಕ್ಕೆ ಬಿದ್ದ ವಾಹನ; 11 ಮಂದಿ ಸಾವು

ರಂಬನ್‌,ಮಾ.16-ವಾಹನವೊಂದು ಕಂದಕಕ್ಕೆ ಬಿದ್ದು 11 ಮಂದಿ ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದ ರಂಬನ್ ನ ಕುಂಡಾ ಮಾಡ್ ನಲ್ಲಿ ನಡೆದಿದೆ.

15 ಪ್ರಯಾಣಿಕರಿದ್ದ ಎಸ್‌ಯುವಿ ವಾಹನ ಚಂದ್ರಕೋಟ್‌ನಿಂದ ರಾಜಗಡಕ್ಕೆ ತೆರಳುತ್ತಿತ್ತು. ಮಾರ್ಗ ಮಧ್ಯೆ ಈ ದುರ್ಘಟನೆ ಸಂಭವಿಸಿದೆ.

ಕುಂಡಾದಲ್ಲಿನ ಬಾಗಲಿಹಾರ್‌ ಪವರ್‌ ಹೌಸ್‌ ಬಳಿ ಬೆಳಿಗ್ಗೆ ವಾಹನ ಚಾಲಕನ ನಿಯಂತ್ರಣ ತಪ್ಪಿ ಸುಮಾರು 500 ಅಡಿ ಆಳದ ಕಂದಕಕ್ಕೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಮೃತ ದೇಹಗಳನ್ನು ಮೇಲಕ್ಕೆ ತಂದಿದ್ದಾರೆ.

ಘಟನಾ ಸ್ಥಳದಲ್ಲಿ ಆರು ಮಂದಿ ಸಾವಿಗೀಡಾಗಿದ್ದು, ತೀವ್ರ ಗಾಯಗೊಂಡ ಐವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಚಾಲಕ ಸೇರಿಂತೆ ಮೂವರು ತೀವ್ರ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಮ್ಮುವಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾಗಿ ವರದಿಯಾಗಿದೆ. (ಎಂ.ಎನ್)

Leave a Reply

comments

Related Articles

error: