ಪ್ರಮುಖ ಸುದ್ದಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಕಣಕ್ಕೆ : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಘೋಷಣೆ

ರಾಜ್ಯ(ಬೆಂಗಳೂರು)ಮಾ.17:- ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಅವರನ್ನು ಕಣಕ್ಕಿಳಿಸಲಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಘೋಷಿಸಿದರು.

ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡಲಾಗಿದೆ.  ಕಳೆದ ಉಪ ಚುನಾವಣೆಯಲ್ಲಿಯೂ ಈ ಕ್ಷೇತ್ರವನ್ನು ಕಾಂಗ್ರೆಸ್, ಜೆಡಿಎಸ್ ಗೆ ಬಿಟ್ಟುಕೊಟ್ಟಿತ್ತು. ಉಪ ಚುನಾವಣೆಯಲ್ಲೂ ಮಧು ಬಂಗಾರಪ್ಪ ಅವರೇ ಸ್ಪರ್ಧಿಸಿ  ಬಿಎಸ್ ವೈ ಪುತ್ರ ಬಿವೈ ರಾಘವೇಂದ್ರ ಅವರ ವಿರುದ್ಧ ಸೋಲನ್ನಪ್ಪಿದ್ದರು.

ಇದೀಗ ಮತ್ತೆ ಮಧು ಬಂಗಾರಪ್ಪ ಅವರನ್ನೇ ಮೈತ್ರಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುತ್ತಿರುವುದಾಗಿ ಹೆಚ್.ಡಿ ದೇವೇಗೌಡರು ಘೋಷಣೆ ಮಾಡಿದ್ದಾರೆ.  ಬಳಿಕ ಮಾತನಾಡಿದ ಹೆಚ್.ಡಿ ದೇವೇಗೌಡರು,ಹಾಸನ ಮಂಡ್ಯದಲ್ಲಿ  ಮೊಮ್ಮಕ್ಕಳ ಗೆಲುವಿಗೆ ಶ್ರಮಿಸುವ ರೀತಿ  ಮಧು ಬಂಗಾರಪ್ಪ  ಗೆಲುವಿಗೆ ಯತ್ನಿಸುತ್ತೇವೆ ಎಂದು ಹೇಳಿದರು.

ಶಿವಮೊಗ್ಗದಲ್ಲಿ  ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮಧು ಬಂಗಾರಪ್ಪ ಪರವಾಗಿ ಪ್ರಚಾರ ನಡೆಸಿದ್ದಾರೆ.ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಒಟ್ಟಾಗಿ ಮಧು ಬಂಗಾರಪ್ಪ ಗೆಲುವಿಗೆ ಶ್ರಮ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: