ಮೈಸೂರು

ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ನಿಧನಕ್ಕೆ ಸಚಿವ ಜಿಟಿ ದೇವೇಗೌಡ ಸಂತಾಪ

ಮೈಸೂರು,ಮಾ.18:- ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ನಿಧನಕ್ಕೆ  ಸಚಿವ ಜಿಟಿ ದೇವೇಗೌಡ ಸಂತಾಪ ವ್ಯಕ್ತಪಡಿಸಿದ್ದಾರೆ.

ಪರಿಕ್ಕರ್ ನಿಧನಕ್ಕೆ ಟ್ವೀಟರ್ ನಲ್ಲಿ ಸಂತಾಪ ವ್ಯಕ್ತಪಡಿಸಿರುವ ಅವರು ತಮ್ಮ ಸರಳತೆ ಮತ್ತು ಸಜ್ಜನಿಕೆಯಿಂದ ಜನಪ್ರಿಯರಾಗಿದ್ದ ಅಪರೂಪದ ರಾಜಕಾರಣಿ, ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ನಿಧನ ನನಗೆ ತುಂಬಾ ಆಘಾತ ಉಂಟುಮಾಡಿದೆ.

ಮಾದರಿ‌ ಜನನಾಯಕರಾಗಿದ್ದ ಪರಿಕ್ಕರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ಈ ನೋವು ಭರಿಸುವ ಶಕ್ತಿಯನ್ನು ತಾಯಿ ಚಾಮುಂಡೇಶ್ವರಿ ನೀಡಲಿ ಎಂದು ಬರೆದುಕೊಂಡಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: