ಸುದ್ದಿ ಸಂಕ್ಷಿಪ್ತ

ದಿ.20 ರಿಂದ ಭೌದ್ಧಿಕ ಕೌಶಲ್ಯಾಭಿವೃದ್ಧಿ ಕಾರ್ಯಾಗಾರ

ಮೈಸೂರು,ಮಾ.18 : ಮೈವಿವಿಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸುವ ಸಲುವಾಗಿ ಮೈವಿವಿಯಿಂದ ಭೌದ್ಧಿಕ ಕೌಶಲ್ಯಾಭಿವೃದ್ಧಿ ಕಾರ್ಯಾಗಾರವನ್ನು ಮಾ.20, 21ರಂದು ಹಮ್ಮಿಕೊಳ್ಳಲಾಗಿದೆ.

ದಿ.20ರ ಬೆಳಗ್ಗೆ 10 ಗಂಟೆಗೆ ಮಾನಸಗಂಗೋತ್ರಿಯ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮವನ್ನು ಗುಲಬರ್ಗಾ ವಿವಿಯ ಕುಲಪತಿ ಪ್ರೊ.ಎಸ್.ಆರ್.ನಿರಂಜನ ಉದ್ಘಾಟಿಸುವರು, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಮೈವಿವಿ ಕುಲಸಚಿವ ಪ್ರೊ.ಲಿಂಗರಾಜ ಗಾಂಧಿ ಮುಖ್ಯ ಅತಿಥಿಗಳಾಗಿದ್ದಾರೆ. ಕುಲಪತಿ ಪ್ರೊ.ಜಿ.ಹೇಂತ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

ದಿ.21ರ ಸಂಜೆ 4ಕ್ಕೆ ಸಮಾರೋಪ ಸಮಾರಂಭ, ಅಂತಾರಾಷ್ಟ್ರೀಯ ಕ್ರೀಡಾಪಟು ಅರ್ಜುನ್ ದೇವಯ್ಯ ತೀತಮಾಡ ಮುಖ್ಯ ಅತಿಥಿಯಾಗಿದ್ದಾರೆ. ಕುಲಸಚಿವ ಪ್ರೊ.ಕೆ.ಎ.ಮಹದೇವನ್ ಅಧ್ಯಕ್ಷತೆ ವಹಿಸಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: