ಮೈಸೂರು

ಹೊಸ ಮತದಾರರಿಗೆ ಮನೆ ಮನೆಗೆ ತೆರಳಿ ಚುನಾವಣಾ ಗುರುತಿನ ಚೀಟಿ ವಿತರಣೆ

ಮೈಸೂರು ಮಾ.19:-ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ನಗರ ಪ್ರದೇಶದ ಮೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 18 ವರ್ಷ ತುಂಬಿದವರು ಹೊಸದಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿರುವ ಯುವ ಮತದಾರರ ಮನೆ ಮನೆಗೆ ತೆರಳಿ ನಗರದ ಎಲ್ಲಾ ವಾರ್ಡ್‍ಗಳಲ್ಲಿ ಚುನಾವಣಾ ಗುರುತಿನ ಕಾರ್ಡ್ ವಿತರಿಸುಲಾಗುತ್ತಿದೆ ಎಂದು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರಾದ ಶಿವಾನಂದ ಮೂರ್ತಿ ಅವರು ತಿಳಿಸಿದರು.

ಭಾನುವಾರದಿಂದ ನಗರದಲ್ಲಿ ಚುನಾವಣಾ ಗುರುತಿನ ಚೀಟಿಯನ್ನು ವಿತರಣೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು. ಏಪ್ರಿಲ್ 18 ರಂದು ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ  ತಪ್ಪದೇ ಮತದಾನ ಮಾಡುವಂತೆ ಹೊಸ ಯುವ ಮತದಾರರಿಗೆ ಅರಿವು ಮೂಡಿಸಲಾಗುತ್ತಿದೆ. ಕೃಷ್ಣರಾಜ ಕ್ಷೇತ್ರದಲ್ಲಿ 2400, ಚಾಮರಾಜ ಕ್ಷೇತ್ರದಲ್ಲಿ 1700 ಹಾಗೂ ನರಸಿಂಹ ರಾಜ ಕ್ಷೇತ್ರದಲ್ಲಿ 2468 ಹೊಸ ಯುವ ಮತದಾರರು ಚುನಾವಣಾ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ.  ಹೊಸ ಸೇರ್ಪಡೆಯಾಗಿರುವವರು ಪ್ರಥಮ ಬಾರಿಗೆ ಮತದಾನ ಮಾಡಲು ಉತ್ಸುಕರಾಗಿದ್ದಾರೆ.

ಸೆಕ್ಟರ್ ಅಧಿಕಾರಿ, ರೆವಿನ್ಯೂ ಅಧಿಕಾರಿ ಹಾಗೂ ಬೂತ್ ಮಟ್ಟದ ಅಧಿಕಾರಿಗಳು ಚುನಾವಣಾ ಗುರುತಿನ ಕಾರ್ಡ್‍ಗಳನ್ನು ವಿತರಿಸುವ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಈ ಪ್ರಕ್ರಿಯೆ ಹೊಸ ಯುವ ಮತದಾರರಿಗೆ ಕಾರ್ಡ್ ತಲುಪಿಸುವ ವರೆವಿಗೂ ನಡೆಯಲಿದೆ.

ಯುವ ಮತದಾರರು  ಚುನಾವಣೆ ಪ್ರಕ್ರಿಯೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಉತ್ತಮ ಪ್ರಜಾಪ್ರಭುತ್ವ ಸರ್ಕಾರ ಅಸ್ತಿತ್ವಕ್ಕೆ ಬರಲು ಕಡ್ಡಾಯವಾಗಿ ಮತದಾನ ಮಾಡಬೇಕಿದೆ. ಚುನಾವಣಾ ಆಯೋಗವು ಮತ್ತು ಚುನಾವಣಾ ಅಧಿಕಾರಿಗಳು ಯುವ ಮತದಾರರನ್ನು ಮತದಾನ ಕಡೆ ಸೆಳೆಯಲು ಸಾಮಾಜಿಕ ಜಾಲತಾಣಗಳಲ್ಲಿಯೂ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: