ಮೈಸೂರು

ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ರಾಜ್ಯ ಸರ್ಕಾರಿ ನೌಕರರ ಹಾಗೂ ನಿವೃತ್ತ ನೌಕರರ ಸಂಘ ಮತ್ತು ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ಉಚಿತ ಕಣ್ಣಿನ ಮತ್ತು ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸಂಘದ ಗೌರವಾಧ್ಯಕ್ಷ ಹೆಚ್.ಕೆ.ರಾಮು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬುಧವಾರ ಪತ್ರಕರ್ತರ ಭವನದಲ್ಲಿ ಮಾತನಾಡಿ ಜ.29ರ ಬೆಳಿಗ್ಗೆ 9 ರಿಂದ ಮದ್ಯಾಹ್ನ 1ರವರೆಗೆ ಧ್ವನಂತರಿ ರಸ್ತೆಯಲ್ಲಿರುವ ಸರ್ಕಾರಿ ನೌಕರರ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು ನಗರದ ನಾರಾಯಣ ಹೃದ್ರೋಗ ಆಸ್ಪತ್ರೆ ಹಾಗೂ ಮಹಾವೀರ ಜೈನ್ ಕಣ್ಣಿನ ಆಸ್ಪತ್ರೆಯ ತಜ್ಞ ವೈದ್ಯರು ಶಿಬಿರದಲ್ಲಿ ಪಾಲ್ಗೊಂಡು ತಪಾಸಣೆ ನಡೆಸುವರು, ಜಿಲ್ಲೆಯಲ್ಲಿ ಸುಮಾರು 45 ಸಾವಿರ ನೌಕರರಿದ್ದು 15 ಸಾವಿರ ಜನ ನಿವೃತ್ತರಿದ್ದಾರೆ, ಈಗಾಗಲೇ ಸಂಘದ ಸದಸ್ಯರುಗಳಿಗೆ ಹಾಗೂ ಕುಟುಂಬ ವರ್ಗದವರಿಗೆ ಪ್ರತಿ ತಿಂಗಳು ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮಾರುಕಟ್ಟೆ ವ್ಯವಸ್ಥಾಪಕ ಕುಶಾಲ್ ಮಾತನಾಡಿ ಶಿಬಿರದಲ್ಲಿ ಕಣ್ಣು, ಮಧುಮೇಹ, ರಕ್ತದೊತ್ತಡ ಸೇರಿದಂತೆ ಹಲವಾರು ಖಾಯಿಲೆಗಳಿಗೆ ತಪಾಸಣೆ ನಡೆಸಿ ಅವಶ್ಯವಿರುವವರಿಗೆ ಔಷಧವನ್ನು ವಿತರಿಸಲಾಗುವುದು ಎಂದು ತಿಳಿಸಿದರು.

ಸಂಘದ ಅಧ್ಯಕ್ಷ ಹೆಚ್.ವಿ.ಗಣೇಶ್, ಪಿ.ಜಿ.ಆನಂದ್, ಮಂಟೇಲಿಂಗಯ್ಯ ಹಾಗೂ ಭಗವಾನ್ ಮಹಾವೀರ್ ಕಣ್ಣಿನ ಆಸ್ಪತ್ರೆಯ ಮಹೇಶ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

Leave a Reply

comments

Related Articles

error: