ಪ್ರಮುಖ ಸುದ್ದಿ

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎರಡಂಕಿ ದಾಟಲು ಬಿಡುವುದಿಲ್ಲ : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಶಪಥ

ರಾಜ್ಯ(ಬೆಂಗಳೂರು)ಮಾ.19:- ಈ ಬಾರಿ ಲೋಕಸಭಾ ಚುನಾವಣೆಯಲ್ಲಿ  ಬಿಜೆಪಿಯನ್ನು ಎರಡಂಕಿ ದಾಟಲು ಬಿಡುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಶಪಥ ಮಾಡಿದ್ದಾರೆ.

ಲೋಕಸಭೆ ಚುನಾವಣೆ ಸಂಬಂಧ ದೋಸ್ತಿನಾಯಕರು ಸಭೆ ನಡೆಸಿ ಚರ್ಚಿಸಿದರು. ಬಳಿಕ ಖಾಸಗಿ ಹೋಟೆಲ್ ನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.    ನಾವೆಲ್ಲರೂ ಒಟ್ಟಾಗಿ ಸೇರಿ ಚರ್ಚಿಸಿ ನಿರ್ಧಾರಕ್ಕೆ ಬಂದಿದ್ದೇವೆ. ನಮಗೆ ಸಮಯ ಕಡಿಮೆ ಇದೆ. ಈಗಿನಿಂದಲೇ ಭಿನ್ನಾಭಿಪ್ರಾಯಗಳನ್ನು ಶಮನ ಮಾಡಲು ನಿರ್ಧಾರ ಮಾಡಿದ್ದೇವೆ.  ಭಿನ್ನಾಭಿಪ್ರಾಯ ಮುಂದುವರೆಯದಂತೆ ಕ್ರಮ ಕೈಗೊಳ್ಳುತ್ತೇವೆ. ಎರಡು ಪಕ್ಷದ ಶಾಸಕರು, ಮುಖಂಡರು ಒಡಕು ಮಾತನಾಡಬಾರದು. ಏನೇ ಬಿಕ್ಕಟ್ಟಿದ್ದರೂ ನಾವು  ಚರ್ಚಿಸಿ ಬಗೆಹರಿಸುತ್ತೇವೆ ಎಂದರು.

ಬಿಜೆಪಿ  ಎರಡಂಕಿ ದಾಟಲು ಬಿಡಲ್ಲ.  ಜನರು ತೀರ್ಪು ನೀಡುತ್ತಾರೆ. ರಾಜ್ಯದಲ್ಲಿ ಬಿಜೆಪಿ ಶಕ್ತಿ ಕುಗ್ಗಿಸಲು  ಹೋರಾಡುತ್ತೇವೆ. ನಮ್ಮ 12 ಸ್ಥಾನದ ಜತೆಗೆ 16 ಸ್ಥಾನ ಕಸಿಯೋ ಸಾಧ್ಯತೆ ಇದೆ. ಅ ದೃಢವಾದ ನಂಬಿಕೆ ನಮಗೂ ಇದೆ. ಸಿದ್ದರಾಮಯ್ಯಗೂ ಇದೆ.  28 ಕ್ಷೇತ್ರಗಳಲ್ಲೂ  ಎರಡು ಪಕ್ಷದವರು ಒಟ್ಟಿಗೆ ಪ್ರವಾಸ ಮಾಡುತ್ತೇವೆ. ಮಾರ್ಚ್ 31ರಂದು ರಾಹುಲ್ ಗಾಂಧಿ ಬರ್ತಾರೆ ಸಂದೇಶ ಕೊಡುತ್ತಾರೆ ಎಂದು ಹೇಳಿದರು.

ಪ್ರಧಾನಿ ಮೋದಿಯವರು ಮಹಾಘಟಬಂಧನ್  ಬಗ್ಗೆ ವ್ಯಂಗ್ಯವಾಗಿ ಮಾತನಾಡುತ್ತಿದ್ದಾರೆ. ಅದರೇ ಅವರ ಪಕ್ಷವು ದೇಶದ ವಿವಿಧ ರಾಜ್ಯಗಳಲ್ಲಿ ಮೈತ್ರಿಯಾಗಿರುವುದನ್ನು ಮರೆತು ಮಾತನಾಡುತ್ತಿದ್ದಾರೆ. ಮೈತ್ರಿ ಬಗ್ಗೆ ಅವರು ತಿಳಿದುಕೊಳ್ಳಲಿ ಎಂದು ಟಾಂಗ್ ನೀಡಿದರು. ತಮ್ಮ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಇನ್ನು ತೀರ್ಮಾನಿಸಿಲ್ಲ. ದೆಹಲಿಯಲ್ಲಿ ನನ್ನ ಅವಶ್ಯಕತೆ ಬಗ್ಗೆ ಚರ್ಚಿಸುತ್ತೇನೆ. ಮುಂಬರುವ ದಿವಸಗಳಲ್ಲಿ ಈ ಬಗ್ಗೆ ಉತ್ತರಿಸುವುದಾಗಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ  ಸಿಎಂ ಹೆಚ್.ಡಿ ಕುಮಾರಸ್ವಾಮಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್,  ಈಶ್ವರ್ ಖಂಡ್ರೆ ಮತ್ತಿತರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: