ಸುದ್ದಿ ಸಂಕ್ಷಿಪ್ತ

ರಾಷ್ಟ್ರೀಯ ಸಮ್ಮೇಳನ ನಾಳೆ

ಮೈಸೂರು,ಮಾ.20 : ಮೈವಿವಿಯ ಕಾನೂನು ಶಾಲೆಯಿಂದ ಮಾ.21ರಂದು ರಾಷ್ಟ್ರೀಯ ಸಮ್ಮೇಳನವನ್ನು ಏರ್ಪಡಿಸಲಾಗಿದೆ.

ಅಂದು ಬೆಳಗ್ಗೆ 10 ಗಂಟೆಗೆ ರಾಣಿ ಬಹದ್ದೂರ್ ಸಭಾಂಗಣದಲ್ಲಿ ನಡೆಯುವ ಸಮ್ಮೇಳನವನ್ನು ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಉದ್ಘಾಟಿಸುವರು. ಕುಲಸಚಿವ ಪ್ರೊ.ಲಿಂಗರಾಜ ಗಾಂಧಿ ಮುಖ್ಯ ಅತಿಥಿಯಾಗಿದ್ದಾರೆ. ಡೀನ್ ಪ್ರೊ.ಸಿ.ಬಸವರಾಜು ಅಧ್ಯಕ್ಷತೆ ವಹಿಸುವರು. (ಕೆ.ಎಂ.ಆರ್)

Leave a Reply

comments

Related Articles

error: