ಕರ್ನಾಟಕ

ಮೊದಲ ಹಂತದ ವಿದ್ಯುನ್ಮಾನ ಮತಯಂತ್ರ, ವಿ.ವಿ. ಪ್ಯಾಟ್, ರ್‍ಯಾಂಡಮೈಜೇಷೆನ್ ಪ್ರಕ್ರಿಯೆ

ಮಂಡ್ಯ (ಮಾ.22): ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲಾ ವ್ಯಾಪ್ತಿಯ 7 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮೊದಲ ಹಂತದ ವಿದ್ಯುನ್ಮಾನ ಮತಯಂತ್ರ ಹಾಗೂ ವಿ.ವಿ. ಪ್ಯಾಟ್, ರ್ಯಾಂಡಮೈಜೇಷೆನ್ ಪ್ರಕ್ರಿಯೆ ಇಂದು ನಡೆಯಿತು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಎನ್.ಮಂಜುಶ್ರೀ ಹಾಗೂ ವಿವಿಧ ರಾಜಕೀಯ ಪಕ್ಷಗಳ ಸಮ್ಮುಖದಲ್ಲಿ ಇ.ವಿ.ಎಂ, ವಿ.ವಿ. ಪ್ಯಾಟ್, ರ್ಯಾಂಡಮೈಜೇಷೆನ್ ಪ್ರಕ್ರಿಯೆಯನ್ನು ಕೈಗೊಳ್ಳಲಾಯಿತು.

ಮಂಡ್ಯ ವಿಧಾನಸಭಾ ಕ್ಷೇತ್ರವ್ಯಾಪ್ತಿಯ 258 ಮತಗಟ್ಟೆಗಳು, ಮಳವಳ್ಳಿ ವಿಧಾನಸಭಾ ಕ್ಷೇತ್ರದ 268 ಮತಗಟ್ಟೆಗಳು, ಮದ್ದೂರು ವಿಧಾನಸಭಾ ಕ್ಷೇತ್ರದ 253 ಮತಗಟ್ಟೆಗಳು, ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ 249 ಮತಗಟ್ಟೆಗಳು, ನಾಗಮಂಗಲ ವಿಧಾನಸಭಾ ಕ್ಷೇತ್ರದ 257 ಮತಗಟ್ಟೆಗಳು, ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ 258 ಮತಗಟ್ಟೆಗಳು ಹಾಗೂ ಮೇಲುಕೋಟೆ ವಿಧಾನಸಭಾ ಕ್ಷೇತ್ರದ 251 ಮತಗಟ್ಟೆಗಳು ಸೇರಿದಂತೆ ಒಟ್ಟು 1,794 ಮತಗಟ್ಟೆಗಳಿಗೆ ಪ್ರಥಮ ಹಂತದ ಇ.ವಿ.ಎಂ, ವಿ.ವಿ.ಪ್ಯಾಟ್, ರ್ಯಾಂಡಮೈಜೇಷೆನ್ ಪ್ರಕ್ರಿಯೆಯನ್ನು ನಡೆಸಲಾಯಿತು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರು ಮಾತನಾಡಿ ಭಾರತ ಚುನಾವಣಾ ಆಯೋಗದ ಆದೇಶದಂತೆ ಪ್ರಥಮ ಹಂತದ ರ್ಯಾಂಡಮೈಜೇಷೆನ್ ಪ್ರಕ್ರಿಯೆಯನ್ನು ನಡೆಸಲಾಗಿದೆ. ಮುಕ್ತ ಹಾಗೂ ಪಾರದರ್ಶಕವಾಗಿ ನಿರ್ವಹಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಜೆ.ಎಂ.ರೂಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ನರಸಿಂಹಮೂರ್ತಿ, ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ದಿನೇಶ್, ಮಂಜುನಾಥ್, ನವೀನ್ ಹಾಗೂ ಪುಟ್ಟಸ್ವಾಮಿ ಹಾಗೂ ಇತರರು ಹಾಜರಿದ್ದರು. (ಎನ್.ಬಿ)

Leave a Reply

comments

Related Articles

error: