ಮೈಸೂರು

ಹಳೆ ದ್ವೇಷದ ಹಿನ್ನೆಲೆ : ಯುವಕನ ಕೊಲೆ

ಯುವಕನೋರ್ವನನ್ನು ಚಾಕುವಿನಿಂದ ಚುಚ್ಚಿ ಬರ್ಬರವಾಗಿ ‌ ಕೊಲೆಗೈದ ಘಟನೆ ಮಂಡ್ಯದಲ್ಲಿ ನಡೆದಿದೆ.

ಕೊಲೆಯಾದ ಯುವಕನನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮುಟ್ಟನಹಳ್ಳಿ ಗ್ರಾಮದ ಎಂ.ಬಿ.ಶರತ್ ಎಂದು ಗುರುತಿಸಲಾಗಿದೆ.

ಹಳೆ ದ್ವೇಷದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಚಾಕುವಿನಿಂದ ಚುಚ್ಚಿ ಶರತ್ ನನ್ನು ಕೊಲೆಗೈಯ್ಯಲಾಗಿದೆ ಎಂದು ತಿಳಿದುಬಂದಿದೆ. ಪೊಲೀಸರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಿ ಎಂಬಾತನನ್ನು ಬಂಧಿಸಿದ್ದಾರೆ .

ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

comments

Related Articles

error: