ಕರ್ನಾಟಕಪ್ರಮುಖ ಸುದ್ದಿ

ಪಿ.ಯು. ಉಪನ್ಯಾಸಕರ ನೇಮಿಸಲು ವಾರದಲ್ಲಿ ಅಧಿಸೂಚನೆ : ತನ್ವೀರ್ ಸೇಠ್

ರಾಯಚೂರು: ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 1900 ಉಪನ್ಯಾಸಕರ ಹುದ್ದೆಗಳ ನೇಮಕಾತಿಗಾಗಿ ಮುಂದಿನವಾರ ಅಧಿಸೂಚನೆ ಹೊರಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, “2015ರಲ್ಲಿ 1016 ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದ್ದು ವಯೋಮಿತಿ ಮೀರಿರುವ 268 ಅಭ್ಯರ್ಥಿಗಳನ್ನು ಹೊಸ ನೇಮಕಾತಿ ಪ್ರಕ್ರಿಯೆಯಲ್ಲಿ ಪರಿಗಣಿಸಲಾಗುವುದು” ಎಂದು ತಿಳಿಸಿದರು.

ಎಂಟು ಸಾವಿರ ಶಿಕ್ಷಕರ ನೇಮಕ:

ರಾಜ್ಯದಲ್ಲಿ  ಒಟ್ಟು 14,279 ಶಿಕ್ಷಕರ ಕೊರತೆ ಇದೆ. ತಾತ್ಕಾಲಿಕವಾಗಿ ಈ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. 10 ಸಾವಿರ ಶಿಕ್ಷಕರರನ್ನು ನೇಮಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಮುಂದಿನ ಎರಡು ವರ್ಷದಲ್ಲಿ ಎಂಟು ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಈ ಕುರಿತು ಈಗಾಗಲೇ ಅಧಿಸೂಚನೆ ಸಿದ್ಧವಾಗಿದೆ ಎಂದರು.

ಐದನೇ ತಾರೀಖಿನೊಳಗೆ ಶಿಕ್ಷಕರಿಗೆ ವೇತನ:

ವಿಶೇಷ ಭತ್ಯೆ ನೀಡುವ ಗೊಂದಲದಲ್ಲಿ ಶಿಕ್ಷಕರ ವೇತನ ಬಟವಾಡೆ ವಿಳಂಬ ಆಗಿದೆ. ಸೋಮವಾರದ ಒಳಗೆ ವೇತನ ನೀಡಲು ಇಲಾಖೆಯ ಪ್ರಧಾನ ಕಾರ್ದರ್ಶಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚಿಸಲಾಗಿದೆ. ಮುಂದಿನ ತಿಂಗಳಿನಿಂದ 5ನೇ ತಾರೀಖಿನೊಳಗೆ ಶಿಕ್ಷಕರಿಗೆ ವೇತನ ಬಡವಾಡೆ ಆಗದಿದ್ದರೆ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಉಪನಿರ್ದೇಶಕರ ವೇತನವನ್ನು ತಡೆಹಿಡಿಯಲಾಗುವುದು ಎಂದರು.

Leave a Reply

comments

Related Articles

error: