ಕರ್ನಾಟಕ

ಕಾರು ಅಪಘಾತ: ತುಳು ಚಿತ್ರ ನಿರ್ದೇಶಕ ಹ್ಯಾರಿಸ್ ಹೌದಾಲ್ ಸಾವು

ಮಂಗಳೂರು (ಮಾ.23): ತುಳು ಚಿತ್ರರಂಗದ ಯುವ ನಿರ್ದೇಶಕ ಹ್ಯಾರಿಸ್ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೂಡಬಿದ್ರೆ ಸಮೀಪ ಗುರುವಾರ ತಡರಾತ್ರಿ ಈ ಘಟನೆ ನಡೆದಿದ್ದು, 30 ವರ್ಷದ ಸಿನಿಮಾ ನಿರ್ದೇಶಕ ಹ್ಯಾರಿಸ್ ನಿಧನರಾಗಿದ್ದಾರೆ.

ಹ್ಯಾರಿಸ್ ಹೌದಾಲ್ ತಮ್ಮ ಓಮಿನಿ ಕಾರಿನಲ್ಲಿ ಕಳೆದ ತಡರಾತ್ರಿ ಮೂಡಬಿದ್ರೆಯಿಂದ ಶಿರ್ತಾಡಿ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ. ನಿದ್ದೆ ಮಂಪರಿನಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹ್ಯಾರಿಸ್ ಹೌದಾಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಹ್ಯಾರಿಸ್ ನಿರ್ದೇಶನದ ‘ಆಟಿಡೊಂಜಿ ದಿನ’ ತುಳು ಸಿನಿಮಾದ ಶೂಟಿಂಗ್ ನಡೆಯುತ್ತಿದ್ದು, ಕಳೆದ ಮೂರು ದಿನಗಳಿಂದ ಸರಿಯಾಗಿ ನಿದ್ದೆ ಇರಲಿಲ್ಲ ಎನ್ನಲಾಗಿದೆ. ಹೀಗಿದ್ದರೂ ತಡರಾತ್ರಿ ಕಾರು ಚಲಾಯಿಸಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಕುರಿತು ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಎನ್.ಬಿ)

Leave a Reply

comments

Related Articles

error: