ಸುದ್ದಿ ಸಂಕ್ಷಿಪ್ತ

ಕಾವೇರಿ ನದಿ ನೀರು ಬಳಕೆ ನಿಷೇಧ

ಮಡಿಕೇರಿ ಮಾ.23 :- ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಉಲ್ಭಣಿಸಿರುವುದರಿಂದ ಮತ್ತು ಕೊಡಗು ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ನಿವಾರಿಸುವ ದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ 2019ರ ಮೇ, 31 ರವರೆಗೆ ಕೊಡಗು ಜಿಲ್ಲೆಯಾದ್ಯಂತ ಇರುವ ನದಿ ಹಾಗೂ ನದಿ ಮೂಲಗಳಿಂದ ಕುಡಿಯುವ ನೀರಿನ ಉದ್ದೇಶಕ್ಕೆ ಹೊರತುಪಡಿಸಿ ಬೇರೆ ಯಾವುದೇ ಉದ್ದೇಶಗಳಿಗೆ ಪಂಪ್‍ಸೆಟ್ ಅಥವಾ ಕಾಲುವೆ ಅಥವಾ ಕೊಳವೆಗಳ ಮುಖಾಂತರ ನದಿ ನೀರನ್ನು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ.

ಈ ಆದೇಶದ ಉಲ್ಲಂಘನೆಯು ಭಾರತೀಯ ದಂಡ ಸಂಹಿತೆ 1860 ರ ಕಲಂ 188 ರಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.  (ಕೆಸಿಐ,ಎಸ್.ಎಚ್)

Leave a Reply

comments

Related Articles

error: