ಮೈಸೂರು

ನೀತಿ ಸಂಹಿತೆ ಜಾರಿಯಲ್ಲಿದ್ದರೂ ತಮ್ಮ ಪಕ್ಷ ಮತ್ತು ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರ ಬುಕ್ ಲೆಟ್ ಗಳಲ್ಲಿ ಅಂಚೆ ಕಚೇರಿಯ ಮೂಲಕ ವಿತರಣೆ ಮಾಡಿದ ಸಂಸದ ಪ್ರತಾಪ್ ಸಿಂಹ : ಎಫ್ ಐ ಆರ್ ದಾಖಲು

ಮೈಸೂರು,ಮಾ.25:- ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ನೀತಿ ಸಂಹಿತೆ ಜಾರಿಯಲ್ಲಿದ್ದರೂ ತಮ್ಮ ಪಕ್ಷ ಮತ್ತು ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರಗಳನ್ನು ಬುಕ್ ಲೆಟ್  ಗಳಲ್ಲಿ ಅಂಚೆ ಕಚೇರಿಯ ಮೂಲಕ ವಿತರಣೆ ಮಾಡಿಸಿದ್ದಾರೆಂದು ಆರೋಪಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು ವಿವಿಪುರಂ ಠಾಣೆಗೆ ದೂರು ನೀಡಿದ್ದು, ಎಫ್ ಐ ಆರ್ ದಾಖಲಾಗಿದೆ.

ಕೆ.ಎಸ್.ಶಿವರಾಮು ಅವರು ತಮ್ಮ ದೂರಿನಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ 2019ನೇ ಸಾಲಿನ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ತಮ್ಮ ಪಕ್ಷ ಮತ್ತು ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರಗಳನ್ನು ಬುಕ್ ಲೆಟ್ ಗಳಲ್ಲಿ ಸರ್ಕಾರದ ಅಂಚೆ ಕಛೇರಿ ಮೂಲಕ ವಿತರಣೆ ಮಾಡಿಸಿರುತ್ತಾರೆ. ಈ ಕುರಿತು ಮಾ.14ರಂದು ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ತಿಳಿಸಿದ್ದಾರೆ.  ಆ ದೂರಿನ ಬಗ್ಗೆ ಜಿಲ್ಲಾಧಿಕಾರಿಯವರು ಪರಿಶೀಲಿಸಲಾಗಿ ಸಂಸದರು ಅಂಚೆ ಇಲಾಖೆಯ ಮೂಲಕ ಕಂಚಿಕೆ ಮಾಡಿರುವ ಪ್ರಚಾರ ಪುಸ್ತಕಗಳಲ್ಲಿ ಪ್ರಕಟಣೆಕಾರರ ಅಥವಾ ಮುದ್ರಕರ ವಿವರಗಳು ಮತ್ತು ಯಾರೂ ಮುದ್ರಿಸಿರುತ್ತಾರೆ, ಹಾಗೂ ಯಾರು ಪ್ರಕಟಿಸಿರುತ್ತಾರೆ ಮತ್ತು ಎಷ್ಟು ಸಂಖ್ಯೆಯಲ್ಲಿ ಮುದ್ರಿತವಾಗಿದೆ ಎಂಬುದು ಕಂಡು ಬರುತ್ತಿಲ್ಲ. ಆದ್ದರಿಂದ ಅದು ಪ್ರಜಾಪ್ರತಿನಿಧಿ ಕಾಯ್ದೆ ಕಲಂ 127(ಎ)ನ್ನು ಉಲ್ಲಂಘಿಸಿದಂತಾಗಿರುತ್ತದೆ. ಆ ಬಗ್ಗೆ ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವಂತೆ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿಗೆ ನಿರ್ದೇಶಿಸಿದ್ದು, ಅದರಂತೆ ಸಹಾಯಕ ಚುನಾವಣಾಧಿಕಾರಿ ಚಾಮರಾಜ ವಿಧಾನಸಭಾ ಕ್ಷೇತ್ರದ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಪಿ.ಉಮೇಶ್ ಅವರಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಪಿ.ಉಮೇಶ್ ಬಿನ್ ಪುಟ್ಟರಾಜು(41)ವಲಯ ಕಛೇರಿ-3 ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಫ್ಲೈಯಿಂಗ್ ಸ್ಕ್ವಾಡ್ ಚಾಮರಾಜ ವಿಧಾನಸಭಾ ಕ್ಷೇತ್ರ ಮೈಸೂರು  ಇವರು ಮಾರ್ಚ್ 23ರಂದು ಪೊಲೀಸ್ ಠಾಣೆಗೆ ಹಾಜರಾಗಿ 2019ನೇ ಸಾಲಿನ ಲೋಖಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದರೂ ತಮ್ಮ ಪಕ್ಷ ಮತ್ತು ಕ್ಷೇತ್ರಕ್ಕೆ ಸಮಬಂಧಿಸಿದ ವಿಚಾರಗಳನ್ನು ಬುಕ್ ಲೆಟ್ ಗಳಲ್ಲಿ ಸರ್ಕಾರದ ಅಂಚೆಕಛೇರಿಯ ಮೂಲಕ ವಿತರಣೆ ಮಾಡಿಸಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಪ್ರತಾಪ್ ಸಿಂಹ ಅವರ ಮೇಲೆ ಪ್ರಜಾಪ್ರತಿನಿಧಿ ಕಾಯ್ದೆ ಕಲಂ 127 ರೀತ್ಯಾ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದು, ಠಾಣಾ ಎನ್ ಸಿ ಆರ್ ನಂ.166/2019ರಂತೆ , ಠಾಣೆ ಮೊ.ನಂ.27/2019ಕಲಂ 127(ಎ)ಪ್ರಜಾ ಪ್ರತಿನಿಧಿ ಕಾಯ್ದೆ ರೀತ್ಯಾ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. (ಕೆ.ಎಸ್,ಎಸ್.ಎಚ್)

 

Leave a Reply

comments

Related Articles

error: