ಪ್ರಮುಖ ಸುದ್ದಿ

ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ವೇಳೆ ಅನಿಯಮಿತ ವಿದ್ಯುತ್ ಪೂರೈಸಲು ಮಂಡ್ಯ ಎಸ್.ಪಿ ಸೂಚನೆ

ರಾಜ್ಯ(ಮಂಡ್ಯ)ಮಾ.25:-  ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹಾಗೂ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ವೇಳೆ ಅನಿಯಮಿತ ವಿದ್ಯುತ್ ಪೂರೈಸಿ ಎಂದು ವಿದ್ಯುತ್ ಇಲಾಖೆ ಅಧಿಕಾರಿಗಳಿಗೆ ಮಂಡ್ಯ ಎಸ್ ಪಿ ಸೂಚಿಸಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ವಿದ್ಯುತ್ ಇಲಾಖೆ ಅಧಿಕಾರಿಗಳಿಗೆ  ಪತ್ರ ಬರೆದಿರುವ ಮಂಡ್ಯ ಎಸ್ ಪಿ, ಸಿಎಂ ಪುತ್ರ ನಾಮಪತ್ರ ಸಲ್ಲಿಕೆ ವೇಳೆ ಅನಿಯಮಿತ್ ವಿದ್ಯುತ್ ಪೂರೈಸಿ, ಮಂಡ್ಯದಲ್ಲಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರವಾಸ ಕೈಗೊಳ್ಳಲಿದ್ದಾರೆ. ಸಿಎಂ ಪ್ರವಾಸದ ವೇಳೆ. ಸಮಾರಂಭದ ವೇಳೆ ಅನಿಯಮಿತ್ ವಿದ್ಯುತ್ ಪೂರೈಸಬೇಕು. ಪ್ರತ್ಯೇಕ ಜನರೇಟರ್  ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

 

ಇಂದು ಮಂಡ್ಯ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: