ಮೈಸೂರು

ಲಾರಿ-ಬೈಕ್ ಡಿಕ್ಕಿ: ಬೈಕ್ ಸವಾರ ಸಾವು

ಲಾರಿಗೆ ಹಿಂಬದಿಯಿಂದ ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಹುಣಸೂರಿನಲ್ಲಿ ನಡೆದಿದೆ.

ಮೃತನನ್ನು ಹುಣಸೂರು ತಾಲೂಕಿನ ಗಾವಡಗೆರೆ ನಿವಾಸಿ ನವೀನ್ ಪವಾರ್ (33) ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಪಟ್ಟಣದ ವಿಜಯನಗರ ಬಡಾವಣೆಯಲ್ಲಿದ್ದ ಪತ್ನಿಯ ತವರು ಮನೆಗೆ ಬಂದಿದ್ದ ನವೀನ್,  ಪತ್ನಿ ಹಾಗೂ ಮಗುವನ್ನು ಮಾತನಾಡಿಸಿಕೊಂಡು ವಾಪಸ್ಸು ಊರಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕೆ.ಆರ್.ನಗರ – ಹುಣಸೂರು ರಸ್ತೆಯಲ್ಲಿ ಆರ್.ಕೆ.ಎಫ್ ಸಾಮೀಲ್ ಬಳಿ ಮರ ತುಂಬಿಕೊಂಡು ಹುಣಸೂರಿಗೆ ಹೋಗುತ್ತಿದ್ದ ಲಾರಿಗೆ ಹಿಂಬದಿಯಿಂದ ಬೈಕ್  ಡಿಕ್ಕಿ ಹೊಡೆದಿದೆ. ಲಾರಿಗೆ ಏಕಾಏಕಿ ಬ್ರೇಕ್ ಹಾಕಿದ ಹಿನ್ನೆಲೆಯಲ್ಲಿ ನಿಯಂತ್ರಣ ಕಳೆದುಕೊಂಡು ನವೀನ್  ಲಾರಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.

ಕೆ.ಆರ್.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

comments

Related Articles

error: