ಕರ್ನಾಟಕಪ್ರಮುಖ ಸುದ್ದಿ

ಬಿಜೆಪಿಯ ಎ.ಮಂಜು ಸೇರಿ ಹಾಸನದಲ್ಲಿ ಐವರು ನಾಮಪತ್ರ ಸಲ್ಲಿಕೆ

ಹಾಸನ (ಮಾ.26): ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಹಾಸನ ಲೋಕಸಭಾ ಕ್ಷೇತ್ರದಿಂದ ಇಂದು ಐವರು ನಾಮಪತ್ರ ಸಲ್ಲಿಸಿದ್ದಾರೆ.
ಇಂದು ಭಾರತೀಯ ಜನತಾ ಪಕ್ಷದಿಂದ ಎ ಮಂಜು ಅವರು ತಮ್ಮ ಪತ್ನಿ ತಾರಾ ಮತ್ತು ಹಾಸನ ಕ್ಷೇತ್ರದ ಶಾಸಕರಾದ ಪ್ರೀತಂ ಜೆ ಗೌಡ ಅವರೊಂದಿಗೆ ಆಗಮಿಸಿ ಸೋಮವಾರ ನಾಮಪತ್ರ ಸಲ್ಲಿಸಿದರು.

ಪ್ರಜ್ವಲ್ ರೇವಣ್ಣ ಅವರು ತಮ್ಮ ತಾಯಿ ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಭವಾನಿ ರೇವಣ್ಣ ಮತ್ತು ಸಕಲೇಶಪುರ-ಆಲೂರು ಕ್ಷೇತ್ರದ ಶಾಸಕರಾದ ಹೆಚ್.ಕೆ.ಕುಮಾರಸ್ವಾಮಿ ಅವರೊಂದಿಗೆ ಆಗಮಿಸಿ ಜಾತ್ಯತೀತ ಜನತಾದಳ ಪಕ್ಷದಿಂದ ಮತ್ತೆರಡು ಸೆಟ್ ನಾಮ ಪತ್ರ ಸಲ್ಲಿಸಿದರು.

ಇದಲ್ಲದೆ ಭಾರತೀಯ ಡಾ.ಬಿ.ಆರ್ ಅಂಬೇಡ್ಕರ್ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಹೆಚ್.ಸಿ. ಮಂಜುನಾಥ್ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಹಾಗೆಯೇ ಅರಕಲಗೂಡು ತಾಲ್ಲೂಕಿನ ಬಾನುಗುಂದಿಯ ಬಿ.ಜೆ. ರಮೇಶ್ ಮನೆಮನೆ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಹೊಳೆನರಸೀಪುರದ ಮಹೇಶ್ ಅವರು ಸಹ ಇಂದು ಹಾಸನ ಲೋಕಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. (ಎನ್.ಬಿ)

Leave a Reply

comments

Related Articles

error: