ಮೈಸೂರು

ನಂಜನಗೂಡು ಉಪಚುನಾವಣೆ : ಸ್ಥಳೀಯ ಅಭ್ಯರ್ಥಿಗೆ ಅವಕಾಶ ನೀಡುವಂತೆ ಕೆಪಿಸಿಸಿ ಅಧ್ಯಕ್ಷರಿಗೆ ಒತ್ತಾಯ

ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ವಿ.ಸಿ.ಶ್ರೀನಿವಾಸ್‍ ಮೂರ್ತಿಯವರಿಗೆ ಟಿಕೆಟ್‍ ನೀಡಬೇಕೆಂದು ವಿಶ್ವಕರ್ಮ ಮಹಾಮಂಡಲದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಯುವ ಘಟಕದ ಅಧ್ಯಕ್ಷ ಬೀರಪ್ಪ ಹೆಚ್. ಒತ್ತಾಯಿಸಿದರು.

ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೀರಪ್ಪ, ವಿ.ಸಿ. ಶ್ರೀನಿವಾಸ್ ಮೂರ್ತಿ ಅವರು ಸುಮಾರು 25 ವರ್ಷಗಳಿಂದಲೂ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದು, ಹಲವಾರು ಹುದ್ದೆಗಳನ್ನು ನಿರ್ವಹಿಸಿ, ಸಮಾಜಮುಖಿ ಕಾರ್ಯಗಳಲ್ಲಿ ಶೋಷಿತರಿಗೆ ಬೆಂಬಲವಾಗಿದ್ದಾರೆ.

ನಂಜನಗೂಡು ಕ್ಷೇತ್ರದ ಮತದಾರರು ಸ್ಥಳೀಯ ಅಭ್ಯರ್ಥಿಯನ್ನೇ ಕಣಕ್ಕಿಳಿಸುವಂತೆ ಹಲವಾರು ವರ್ಷಗಳಿಂದ ಕೋರಿದ್ದರೂ ಫಲ ನೀಡಿಲ್ಲ. ಆದ್ದರಿಂದ ಮುಂಬರುವ ಉಪಚುನಾವಣೆಯಲ್ಲಿ ಸ್ಥಳೀಯ ಅಭ್ಯರ್ಥಿಯಾದ ವಿ.ಸಿ.ಶ್ರೀನಿವಾಸ ಪ್ರಸಾದ್ ಅವರಿಗೆ ಅವಕಾಶ ಕಲ್ಪಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರಿಗೆ ಕೋರಿ ಸಾಮಾಜಿಕ ಹೋರಾಟಗಳ ಹರಿಕಾರ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಕನಸನ್ನು ಸಾಕಾರಗೊಳಿಸಬೇಕೆಂದು ಆಗ್ರಹಿಸಿದರು.

ಉಪಾಧ್ಯಕ್ಷ ಚಂದ್ರಕಾಂತ್.ಎನ್. ಕಾರ್ಯದರ್ಶಿ ವಿನೋದ್‍ ರಾಜ್, ಯೋಗೀಶ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Leave a Reply

comments

Related Articles

error: