ಮೈಸೂರು

ವಿದ್ಯಾರ್ಥಿಗಳನ್ನು ಸೆಳೆದುಕೊಳ್ಳಲು ತರಗತಿ ಕ್ರಿಯಾತ್ಮಕವಾಗಿರಬೇಕು : ಡಾ.ಕರಿಸಿದ್ದಪ್ಪ

ವಿದ್ಯಾರ್ಥಿಗಳನ್ನು ಸೆಳೆದುಕೊಳ್ಳಲು ತರಗತಿಗಳು ಕ್ರಿಯಾತ್ಮಕವಾಗಿರಬೇಕು ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕುಲಪತಿ ಡಾ.ಕರಿಸಿದ್ದಪ್ಪ ಅಭಿಪ್ರಾಯಪಟ್ಟರು.

ಮೈಸೂರಿನ  ಖಾಸಗಿ ಹೋಟೆಲ್‍ನಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಶೈಕ್ಷಣಿಕ ಆಡಳಿತಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಡಾ.ಕರಿಸಿದ್ದಪ್ಪ ಮಾತನಾಡಿದರು. ಬೋಧಕರು 40ನಿಮಿಷಗಳ ಕಾಲ ವಿದ್ಯಾರ್ಥಿಗಳನ್ನು ಸೆರೆಹಿಡಿಯುವಂಥಹ ಶಕ್ತಿಯನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಪ್ರಾಧ್ಯಾಪಕರಿಂದ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿರುತ್ತಾರೆ. ಬೋಧನೆಯಲ್ಲಿ ನೂತನ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಇಂಜಿನಿಯರುಗಳನ್ನು ವಿಶ್ವಕ್ಕೆ ನೀಡುವ ಮಹತ್ತರ ಜವಾಬ್ದಾರಿ ಪ್ರಾಧ್ಯಾಪಕರ ಮೇಲಿದೆ ಎಂದು ತಿಳಿಸಿದರು.

ಬೆಂಗಳೂರಿನ ಬಿಎಎಸ್ ತಾಂತ್ರಿಕ ಕಾಲೇಜು ಪ್ರಾಂಶುಪಾಲ ಡಾ.ಕೆ.ಮಲ್ಲಿಕಾರ್ಜುನ ಬಾಬು, ಎನ್‍ಐಇ ಕಾಲೇಜು ಕಾರ್ಯದರ್ಶಿ ಜಿ.ಎಸ್.ರಾಮಚಂದ್ರ, ಎನ್‍ಐಇ ಪ್ರಾಂಶುಪಾಲ ಡಾ.ಜಿ.ಎಲ್.ಶೇಖರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: