
ಪ್ರಮುಖ ಸುದ್ದಿ
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ ಹಾಲಿ ಸಂಸದ ಡಿ.ಕೆ ಸುರೇಶ್
ರಾಜ್ಯ(ಬೆಂಗಳೂರು)ಮಾ.26:- ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಹಾಲಿ ಸಂಸದ ಡಿ.ಕೆ ಸುರೇಶ್ ಇಂದು ನಾಮಪತ್ರ ಸಲ್ಲಿಸಿದರು.
ಬೃಹತ್ ಮೆರವಣಿಗೆ ಮೂಲಕ ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಡಿ.ಕೆ ಸುರೇಶ್, ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಡಿ.ಕೆ ಸುರೇಶ್ ಗೆ ಅಣ್ಣ ಸಚಿವ ಡಿ.ಕೆ ಶಿವಕುಮಾರ್, ಸಿಎಂ ಹೆಚ್.ಡಿ ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದರು.
ಮೈತ್ರಿ ಅಭ್ಯರ್ಥಿಯಾಗಿ ಡಿ.ಕೆ ಸುರೇಶ್ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಮಾರ್ಚ್ 31ರಂದು ಜೆಡಿಎಸ್ ಕಾಂಗ್ರೆಸ್ ಬೃಹತ್ ಜಂಟಿ ಪ್ರಚಾರ ಸಭೆ ಆಯೋಜಿಸಿದೆ. ಅಂದು ಮಾದನಾಯಕನಹಳ್ಳಿಯ ವಸ್ತು ಪ್ರದರ್ಶನ ಮೈದಾನದಲ್ಲಿ ಪ್ರಚಾರ ಸಭೆ ನಡೆಯಲಿದ್ದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್ ಎಲ್ಲರೂ ಭಾಗಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದರು. (ಕೆ.ಎಸ್,ಎಸ್.ಎಚ್)