
ಪ್ರಮುಖ ಸುದ್ದಿ
ಚಾಮರಾಜನಗರ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಉಮೇದುವಾರಿಕೆ ಸಲ್ಲಿಕೆ
ರಾಜ್ಯ(ಚಾಮರಾಜನಗರ)ಮಾ.26:- ಇದೀಗ ಚಾಮರಾಜನಗರ ಲೋಕಸಭಾ ಕ್ಷೇತ್ರ ಕುತೂಹಲದ ಕ್ಷೇತ್ರವಾಗಿ ಮಾರ್ಪಟ್ಟಿದ್ದು, ಇಂದು ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರು ಚುನಾವಣಾಧಿಕಾರಿಯವರಿಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.
ಚುನಾವಣಾಧಿಕಾರಿ ಬಿ.ಬಿ.ಕಾವೇರಿಯವರಿಗೆ ತಮ್ಮ ನಾಮಪತ್ರ ಸಲ್ಲಿಸುವ ಮೂಲಕ ಶಿಷ್ಯ ಧೃವನಾರಾಯಣ್ ವಿರುದ್ಧ ಸಮರ ಸಾರಿದ್ದಾರೆ. ಇಂದು ಮಧ್ಯಾಹ್ ಬಿಜೆಪಿ ಮುಖಂಡರೊಂದಿಗೆ ಚಾಮರಾಜೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಬಳಿಕ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಸಾಗಿ ಜಿಲ್ಲಾಡಳಿತ ಭವನದಲ್ಲಿರುವ ಚುನಾವಣಾಧಿಕಾರಿಗಳ ಕಛೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಮಾಜಿ ಸಚಿವ ಕೋಟೆ ಶಿವಣ್ಣ, ಚಾಮರಾಜನಗರ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಆರ್.ಮಲ್ಲಿಕಾರ್ಜುನಪ್ಪ, ಮುಖಂಡರಾದ ಎಂ ರಾಮಚಂದ್ರ, ಹನುಮಂತಶೆಟ್ಟಿ ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)