ಕರ್ನಾಟಕಪ್ರಮುಖ ಸುದ್ದಿ

ಟ್ವೀಟರ್‌ ಲೈವ್‍ನಲ್ಲಿ ಸಿದ್ದರಾಮಯ್ಯ ನೇರ ಸಂವಾದ!

ಬೆಂಗಳೂರು (ಮಾ.26): ಸಾಮಾಜಿಕ ಜಾಲತಾಣದಲ್ಲಿ ಅಗ್ರಸ್ಥಾನದಲ್ಲಿರುವ ಟ್ವಿಟರ್ ಇಂಡಿಯಾ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನೇರ ಪ್ರಸಾರ ಕಾರ್ಯಕ್ರಮ ಆಯೋಜಿಸಿದೆ. ಸಿದ್ಧರಾಮಯ್ಯ ಅವರು ರಾಜ್ಯ ರಾಜಕಾರಣದಲ್ಲಿ ಮಾತ್ರವಲ್ಲ, ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಹೀಗಾಗಿ ಟ್ವಿಟರ್ ಇಂಡಿಯಾ ಸಿದ್ಧರಾಮಯ್ಯ ಅವರನ್ನು ನೇರ ಪ್ರಸಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದೆ.

ಈಗಾಗಲೇ ಸಿದ್ಧರಾಮಯ್ಯ ಅವರಿಗೆ ಕೇಳಬಹುದಾದ ಪ್ರಶ್ನೆಗಳನ್ನು ಆಹ್ವಾನಿಸಲಾಗಿತ್ತು. ಅದನ್ನು ಆಧರಿಸಿ ಟ್ವಿಟರ್ ಬಳಕೆದಾರರಿಂದ ಪ್ರಶ್ನೆಗಳನ್ನು ಆಹ್ವಾನಿಸಲಾಗಿತ್ತು. ಇಂದು ಮಧ್ಯಾಹ್ನ 2.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ನಡೆಯುವ ನೇರ ಪ್ರಸಾರ ಸಂವಾದ ಕಾರ್ಯಕ್ರಮದಲ್ಲಿ ಸಿದ್ಧರಾಮಯ್ಯ ಅವರು ಉತ್ತರ ನೀಡಲಿದ್ದಾರೆ. ಕಾರ್ಯಕ್ರಮ ನಿರೂಪಣೆಗಾಗಿ ಈಗಾಗಲೇ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಈ ಮೂಲಕ ಸಿದ್ಧರಾಮಯ್ಯ ಅವರು, ಮತ್ತೊಮ್ಮೆ ರಾಷ್ಟ್ರ ರಾಜಕಾರಣದ ಗಮನ ಸೆಳೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಪ್ರಭಾವಿ ರಾಜಕಾರಣಿಯಾಗಿ ಹೊರ ಹೊಮ್ಮುತ್ತಿದ್ದಾರೆ. ನೇರ ಪ್ರಸಾರ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸಿ ಪ್ರಶ್ನೆಗಳನ್ನು ಕೇಳಬಹುದಾಗಿದೆ. (ಎನ್.ಬಿ)

Leave a Reply

comments

Related Articles

error: