ಮೈಸೂರು

ಚುನಾವಣಾ ಕಾರ್ಯ ಮುಕ್ತಾಯದವರೆಗೂ ಹೊರಗುತ್ತಿಗೆ ವಾಹನ ಹಾಗೂ ಚಾಲಕರನ್ನು ಮುಂದುವರೆಸಲು ಡಿಸಿ ಸೂಚನೆ

ಮೈಸೂರು, ಮಾ.27:-  ಲೋಕಸಭಾ ಸಾರ್ವತ್ರಿಕ ಚುನಾವಣೆ 2019 ಸಂಬಂಧ ಚುನಾವಣಾ ಕಾರ್ಯಕ್ಕೆ ಸರ್ಕಾರಿ ವಾಹನಗಳ ಜೊತೆಗೆ ಸರ್ಕಾರಿ ವಾಹನಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಚಾಲಕರನ್ನು ಸಹ ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿರುತ್ತದೆ.
ಕೆಲವು ಇಲಾಖಾ ಅಧಿಕಾರಿಗಳು ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ಚಾಲಕರ ಸೇವೆಯು  31-03-2019ಕ್ಕೆ ಅಂತಿಮಗೊಳ್ಳಲಿದ್ದು, ಅವರನ್ನು ಚುನಾವಣಾ ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಚುನಾವಣಾಧಿಕಾರಿಗಳನ್ನು ಕೋರಿರುತ್ತಾರೆ.
ಮೈಸೂರು ಜಿಲ್ಲೆಯಲ್ಲಿ ರಾಜ್ಯ ಸರ್ಕಾರ/ಕೇಂದ್ರ ಸರ್ಕಾರ/ಮಂಡಳಿ ನಿಗಮ/ಸ್ವಾಯತ್ತ ಸಂಸ್ಥೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಪಡೆದಿರುವ ವಾಹನ ಮತ್ತು ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ವಾಹನ ಚಾಲಕರ ಸೇವೆಯನ್ನು ಲೋಕಸಭಾ ಸಾರ್ವತ್ರಿಕ ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ಮುಂದುವರೆಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಅಭಿರಾಮ್ ಜಿ. ಶಂಕರ್ ಅವರು ಇಲಾಖಾ ಮುಖ್ಯಸ್ಥರಿಗೆ ನಿರ್ದೇಶನ ನೀಡಿರುತ್ತಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: