ಕರ್ನಾಟಕಪ್ರಮುಖ ಸುದ್ದಿ

ಪ್ರಜಾಪ್ರಭುತ್ವ ಬಲಗೊಳಿಸಲು ಯುವಜನತೆ ಪಾತ್ರ ಮುಖ್ಯ: ಕಲ್ಪಶ್ರೀ ಸಿ.ಆರ್.

ಹಾಸನ (ಮಾ.27): ಅತೀ ದೊಡ್ಡ ದೇಶವಾದ ಭಾರತ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಿರುವುದರಿಂದ ಮತದಾನ ಮಾಡುವುದರಿಂದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸುವಲ್ಲಿ ಯುವ ಮತದಾರರ ಪಾತ್ರ ಬಹಳ ಮುಖ್ಯ ಎಂದು ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಗಳಾದ ಕಲ್ಪಶ್ರೀ ಸಿ.ಆರ್. ಇವರು ಅಭಿಪ್ರಾಯಪಟ್ಟಿದ್ದಾರೆ.

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆಯವತಿಯಿಂದ ಅರೆವೈದ್ಯಕೀಯ ವಿಭಾಗದ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳಾದ ನಿಚಿತಾ ಕುಮಾರಿ ಇವರು 18 ವರ್ಷದ ತುಂಬಿದ ಎಲ್ಲಾ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ಬೇಕಾದ ಅರ್ಜಿಗಳ ಕುರಿತು ಮಾಹಿತಿ ನೀಡಿದರು ಹಾಗೂ ಇ ವಿ ಎಂ, ವಿ ವಿ ಪ್ಯಾಟ್ ಮತ್ತು ನೋಟಾ ಕುರಿತು ಗುಂಪು ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು. (ಎನ್.ಬಿ)

Leave a Reply

comments

Related Articles

error: