ಕರ್ನಾಟಕಪ್ರಮುಖ ಸುದ್ದಿ

ದೈವಶಕ್ತಿಯಿಂದ ದೇವೇಗೌಡರು ಉನ್ನತ ಸ್ಥಾನ ಅಲಂಕರಿಸಲಿದ್ದಾರೆ: ಕಾಂಗ್ರೆಸ್ ಮಾಜಿ ಶಾಸಕನ ಭವಿಷ್ಯ

ತುಮಕೂರು (ಮಾ.27): ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ದೈವಶಕ್ತಿಯಿಂದ ದೆಹಲಿಯಲ್ಲಿ ಉನ್ನತ ಸ್ಥಾನ ಅಲಂಕರಿಸಲಿದ್ದಾರೆ ಎಂದು ಕಾಂಗ್ರೆಸ್ನ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ದೇವೇಗೌಡರು ತುಮಕೂರು ಕ್ಷೇತ್ರದಲ್ಲಿ ಹೆಚ್ಚು ಮತಗಳ ಅಂತರದಲ್ಲಿ ಜಯಗಳಿಸಿ ಸಂಸತ್‍ಗೆ ಹೋದರೆ ಒಂದು ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಿದೆ. ಹೀಗಾಗಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಕಾರ್ಯಕರ್ತರು ದೇವೇಗೌಡರ ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಇನ್ನು ಹೇಮಾವತಿ ನದಿಯ ನೀರು ಹಂಚಿಕೆ ವಿಚಾರದಲ್ಲಿ ದೇವೇಗೌಡರಿಂದ ತುಮಕೂರಿಗೆ ಯಾವುದೇ ರೀತಿ ಅನ್ಯಾಯವಾಗಿಲ್ಲ. ಹೇಮಾವತಿ ನೀರು ಸರಿಯಾಗಿ ಹಂಚಿಕೆ ಆಗುತ್ತಿರಲಿಲ್ಲ. ಹೀಗಾಗಿ ಹೋರಾಟ ಮಾಡುತ್ತಿದ್ದೇವು, ಸುಖಾಸುಮ್ಮನೆ ಹೆಚ್.ಡಿ.ದೇವೇಗೌಡರ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದರು. (ಎನ್.ಬಿ)

Leave a Reply

comments

Related Articles

error: