ಮೈಸೂರು

ಪ್ರಚಾರ ಸಮಿತಿ ಅಧ್ಯಕ್ಷರಾಗಿ ಆಶೋಕ ನೇಮಕ

ಮೈಸೂರು,ಮಾ.27 : ನಗರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಡಾ.ಎಂ.ಕೆ.ಅಶೋಕ ಅವರನ್ನು ನೇಮಕಗೊಳಿಸಲಾಗಿದೆ.

ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷಕ್ಕಾಗಿ ದುಡಿಯುತ್ತಿರುವ ಅಶೋಕ ಅವರು ಈ ಬಾರಿ ಲೋಕ ಸಭಾ ಚುನಾವಣೆಯಲ್ಲಿ ಪಕ್ಷದ ಸ್ಥಳೀಯ ನಾಯಕರುಗಳ ಸಹಕಾರದೊಂದಿಗೆ ಪ್ರಚಾರ ಕಾರ್ಯದಲ್ಲಿ ಪರಿಣಾಮಕಾರಿಯಾಗಿ ಪಾಲ್ಗೊಂಡು ಕ್ಷೇತ್ರದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕೆಂದು ಎಂಬ ನಿಟ್ಟಿನಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ಎಚ್.ಕೆ.ಪಾಟೀಲ ಅವರು ಈ ಜವಾಬ್ದಾರಿಯನ್ನು ವಹಿಸಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: