ದೇಶಪ್ರಮುಖ ಸುದ್ದಿ

ಗೋಹತ್ಯೆ ನಿಷೇಧ : ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ

ದೇಶದ ಪ್ರತೀ ರಾಜ್ಯದಲ್ಲೂ ಗೋಹತ್ಯೆಗೆ ನಿಷೇಧ ಹೇರಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ವಜಾ ಮಾಡಿದೆ.
ಭಾರತದಲ್ಲಿರುವ ಕೆಲವು ರಾಜ್ಯಗಳಲ್ಲಿ ಮಾತ್ರ ಗೋಹತ್ಯೆಗೆ ನಿಷೇಧವಿದ್ದು, ಗೋಹತ್ಯೆ ನಿಷೇಧವಿರುವ ರಾಜ್ಯಗಳಿಂದ ಇತರ ರಾಜ್ಯಗಳಿಗೆ ಅಕ್ರಮವಾಗಿ ಗೋ ಸಾಗಾಣಿಕೆ ಮಾಡಲಾಗುತ್ತಿದೆ. ಹೀಗಾಗಿ ಇದನ್ನು ತಡೆಯಲು ಕಠಿಣ ಕಾನೂನು ರೂಪಿಸಬೇಕಿದ್ದು, ದೇಶದ ಎಲ್ಲಾ ರಾಜ್ಯಗಳಲ್ಲಿ ಗೋಹತ್ಯೆಗೆ ನಿಷೇಧ ಹೇರಬೇಕೆಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ಈ ಹಿಂದೆ ಸಲ್ಲಿಸಲಾಗಿತ್ತು.
ಅರ್ಜಿ ಸಂಬಂಧ ಶುಕ್ರವಾರ ವಿಚಾರಣೆ ನಡೆಸಿರುವ ನ್ಯಾಯಾಲಯ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಗೋವು ಸಾಗಾಣಿಕೆ ಮತ್ತು ಅದಕ್ಕೆ ಸಂಬಂಧಪಟ್ಟಂತಹ ನಿಯಮಗಳನ್ನು ರೂಪಿಸುವಂತೆ ಈಗಾಗಲೇ ಎಲ್ಲಾ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿದೆ ಎಂದು ತಿಳಿದುಬಂದಿದೆ.

Leave a Reply

comments

Related Articles

error: