ಮೈಸೂರು

ಅಕ್ಸೆಸಿಬಿಲಿಟಿ ವೀಕ್ಷಕರ ನೇಮಕ

ಮೈಸೂರು, ಮಾ.28:-   ಲೋಕಸಭಾ ಚುನಾವಣೆ 2019ರ ನಿಮಿತ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಅಕ್ಸೆಸಿಬಿಲಿಟಿ ವೀಕ್ಷಕರನ್ನಾಗಿ  (Accessibility Observer) ನೇಮಕ ಮಾಡಲಾಗಿದೆ. ವೀಕ್ಷಕರು ಮಾರ್ಚ್ 28 ಹಾಗೂ 29 ರಂದು ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಮಾರ್ಚ್ 28ರಂದು 10 ಗಂಟೆಗೆ ಕೊಡಗು ಜಿಲ್ಲೆಯ ಮತಗಟ್ಟೆಗಳಿಗೆ ಭೇಟಿ ನೀಡಿ ಮಧ್ಯಾಹ್ನ 12.30ಕ್ಕೆ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಸಲಿದ್ದಾರೆ. ಮಾರ್ಚ್ 28 ರಂದು ಸಂಜೆ 4 ಗಂಟೆಗೆ ಮೈಸೂರು ಜಿಲ್ಲೆಯ ಮತಗಟ್ಟೆಗಳಿಗೆ ಭೇಟಿ ನೀಡಿ ಸಂಜೆ 5 ಗಂಟೆಗೆ ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಸಲಿದ್ದಾರೆ.
ಮಾರ್ಚ್ 29ರಂದು 10 ಗಂಟೆಗೆ ಚಾಮರಾಜನಗರ ಜಿಲ್ಲೆಯ ಮತಗಟ್ಟೆಗಳಿಗೆ ಭೇಟಿ ನೀಡಿ ಮಧ್ಯಾಹ್ನ 12:30ಕ್ಕೆ ಚಾಮರಾಜನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಸಲಿದ್ದಾರೆ. ಮಾರ್ಚ್ 29 ರಂದು ಸಂಜೆ 4 ಗಂಟೆಗೆ ಮಂಡ್ಯ ಜಿಲ್ಲೆಯ ಮತಗಟ್ಟೆಗಳಿಗೆ ಭೇಟಿ ನೀಡಿ ಸಂಜೆ 5 ಗಂಟೆಗೆ ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಸಲಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: