ಪ್ರಮುಖ ಸುದ್ದಿಮೈಸೂರು

ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿರುವ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ಡಿ : ಗೊಂದಲಗಳಿಗೆ ತೆರೆ

ಮೈಸೂರು,ಮಾ.28 : ಚುನಾವಣಾ ಪ್ರಚಾರದಿಂದ ದೂರವುಳಿದಿರುವ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರು ನಾಳೆ ನಡೆಯುವ ನಗರ ವ್ಯಾಪ್ತಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ಮೂಡಿರುವ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲಿದ್ದಾರೆ ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ಸ್ಪಷ್ಟಪಡಿಸಿದರು.

ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು,  ನಿಗದಿತ ಕಾರ್ಯಕ್ರಮದ ಹಿನ್ನಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ಡಿಯವರು ಪ್ರಚಾರದಿಂದ ದೂರವುಳಿದಿದ್ದಾರೆ ಹೊರತು ತಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ, ನಾವೆಲ್ಲ ಒಗ್ಗಟ್ಟಿನಿಂದಲೇ ಚುನಾವಣೆ ಎದುರಿಸುತ್ತೇವೆ ಎಂದು ತಿಳಿಸಿದರು.

ನಾಳೆ ನಗರವ್ಯಾಪ್ತಿ ಕಾರ್ಯಕರ್ತರ ಸಭೆ :

ಸಮನ್ವಯ ಸಮಿತಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ  ನಾಳೆ ದಿ.29ರ ಬೆಳಗ್ಗೆ 11 ಗಂಟೆಗೆ ರಿಯೋ ಮೆರಿಡಿಯನ್ ನ ಗಾಯತ್ರಿ ಕನ್ವೆಷನ್ ಹಾಲ್ ನಲ್ಲಿ ನಡೆಯುತ್ತಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷದ ನಗರ ಕಾರ್ಯಕರ್ತರ ಸಭೆಯಲ್ಲಿ  ಸಚಿವ ಸಾ.ರಾ.ಮಹೇಶ್, ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ, ಶಾಸಕ ತನ್ವೀರ್ ಸೇಠ್, ಮಾಜಿ ಶಾಸಕರಾದ ವಾಸು, ಸೋಮಶೇಖರ್, ಮುಖಂಡರಾದ ರಂಗಪ್ಪ, ಕೆ.ವಿ.ಮಲ್ಲೇಶ್ ಹಾಲಿ ಹಾಗೂ ಮಾಜಿ ಜಿ.ಪಂ, ತಾ.ಪಂ. ಸದಸ್ಯರು ಹಾಗೂ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.

.ಅಲ್ಲದೇ ಮೈತ್ರಿ ಪಕ್ಷದ ಕಾರ್ಯಕರ್ತರಲ್ಲಿ ಯಾವುದೇ ಗೊಂದಲವಿಲ್ಲ, ಪಕ್ಷದ ಅಭ್ಯರ್ಥಿ ಗೆಲುವಿಗಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ದುಡಿಯುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ರಘು ಆಚಾರ್, ಕಾಂಗ್ರೆಸ್ ವಕ್ತಾರ ಹೆಚ್.ಎ.ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಶಿವಣ್ಣ, ಮುಖಂಡರಾದ ಜಿ.ವೆಂಕಟ ಸುಬ್ಬಯ್ಯ, ನಾಗಭೂಷಣ ತಿವಾರಿ, ಡೈರಿ ವೆಂಕಟೇಶ್ ಇದ್ದರು. (ವರದಿ : ಕೆ.ಎಂ.ಆರ್)

Leave a Reply

comments

Related Articles

error: