ಪ್ರಮುಖ ಸುದ್ದಿ

ವಿಶೇಷ ಉಪನ್ಯಾಸ ಹಾಗೂ ತೃತೀಯ ಬಿ.ಎ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ರಾಜ್ಯ(ಚಾಮರಾಜನಗರ)ಮಾ.28:-  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗುಂಡ್ಲುಪೇಟೆ, ಚಾಮರಾಜನಗರ ಜಿಲ್ಲೆ ಇಲ್ಲಿ ಕನ್ನಡ ವಿಭಾಗದ ವತಿಯಿಂದ ವಿಶೇಷ ಉಪನ್ಯಾಸ ಹಾಗೂ ತೃತೀಯ ಬಿ.ಎ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು.

ಸಭೆಯ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಪ್ರೊ.ಜಿ.ಮಲ್ಲೇಶ ವಹಿಸಿದ್ದರು. ವಿಶೇಷ ಉಪನ್ಯಾಸ ನೀಡಲು ಆಗಮಿಸಿದ್ದ  ಶ್ರೀನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜು ಉಪಪ್ರಾಂಶುಪಾಲ ಡಾ. ಪ್ರಸಾದ್‍ಮೂರ್ತಿ.ಜಿ,  ಇವರು “ಪ್ರಾಯೋಗಿಕ ವಿಮರ್ಶೆ”ಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ವೇದಿಕೆಯ ಮೇಲೆ ವಿಭಾಗದ ಅಧ್ಯಾಪಕರಾದ ಪ್ರೊ.ಉಮೇಶ, ಪ್ರೊ.ರವಿಕುಮಾರ್.ಹೆಚ್.ಆರ್, ಗುರುಮೂರ್ತಿ.ಎಸ್, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಹೇಮಲತ.ಹೆಚ್.ಆರ್ ಉಪಸ್ಥಿತರಿದ್ದರು. ಪ್ರಥಮ, ದ್ವಿತೀಯ ಹಾಗೂ ತೃತೀಯ ಬಿಎ ವಿದ್ಯಾರ್ಥಿಗಳು ಭಾಗವಹಿಸಿದ್ದರು. (ಎಸ್.ಎಚ್)

Leave a Reply

comments

Related Articles

error: